Andolana originals

ಕೋಟೆ ತಾಲ್ಲೂಕಿನಾದ್ಯಂತ ಗೌರಿ-ಗಣೇಶ ಹಬ್ಬ ಆಚರಣೆಗೆ ಸಿದ್ಧತೆ

ಮಂಜು ಕೋಟೆ

ಬೆಲೆ ದುಬಾರಿಯಾಗಿದ್ದರೂ ಲೆಕ್ಕಿಸದೆ ಪದಾರ್ಥಗಳ ಖರೀದಿ; ನಿಯಮಗಳ ಪ್ರಕಾರ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸೂಚನೆ 

ಎಚ್.ಡಿ.ಕೋಟೆ: ತಾಲ್ಲೂಕಿನಾದ್ಯಂತ ಗೌರಿ- ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಸಿದ್ಧತೆಗಳು ನಡೆದಿವೆ.

ಕೋಟೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಹೆಣ್ಣು ಮಕ್ಕಳು ಮಹಿಳೆಯರು ಹಾಗೂ ಯುವ ಸಮುದಾಯ ಮುಂದಾಗಿದ್ದು, ಮಂಗಳವಾರ ಗೌರಿ ಹಬ್ಬ ಇರುವುದರಿಂದ ಗೌರಿಯ ಪೂಜೆ ನಡೆಸಲು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಬುಧವಾರ ಗಣೇಶ ಹಬ್ಬ ಇರುವುದರಿಂದ ಪುರಸಭೆ ವ್ಯಾಪ್ತಿ ಸೇರಿದಂತೆ ತಾಲ್ಲೂಕು ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜೆ ಸಲ್ಲಿಸಲು ಯುವಕರ ಸಂಘಗಳು, ಸಂಘ-ಸಂಸ್ಥೆಯವರು ನಿಗದಿತ ಸ್ಥಳಗಳಲ್ಲಿ ಚಪ್ಪರ ಹಾಕುವುದು, ಗಣಪತಿ ಮೂರ್ತಿ ಖರೀದಿ ಹಾಗೂ ಇನ್ನಿತರ ಕಾರ್ಯಗಳಲ್ಲಿ ನಿರತರಾಗಿದ್ದಾರೆ.

ಹೂವು, ಹಣ್ಣು, ಕಾಯಿ ಹಾಗೂ ಇನ್ನಿತರ ಪದಾರ್ಥಗಳ ಬೆಲೆ ಹಬ್ಬದ ಪ್ರಯುಕ್ತ ಹೆಚ್ಚಾಗಿದ್ದರೂ ಜನರು ಲೆಕ್ಕಿಸದೆ ಹಬ್ಬವನ್ನು ಸಡಗರದಿಂದ ಆಚರಿಸಲು ಕುಟುಂಬ ಸಮೇತರಾಗಿ ಖರೀದಿಯಲ್ಲಿ ಮಗ್ನರಾಗಿದ್ದಾರೆ.  ಪ್ರತಿಯೊಂದು ಸಮುದಾಯದ ರಸ್ತೆಗಳಲ್ಲೂ ಗಣೇಶ ಮೂರ್ತಿ ಕೂರಿಸಲು ಪೈಪೋಟಿ ಏರ್ಪಟ್ಟಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಎತ್ತರವಾದ ಗಣಪತಿ ಮೂರ್ತಿಯನ್ನು  ಕೂರಿಸಬೇಕೆಂದು ವಿವಿಧೆಡೆಯಿಂದ ಮೂರ್ತಿಯನ್ನು ಖರೀದಿಸಿ ತರಲು ಮುಂದಾಗಿರುವುದು ಕಂಡುಬಂದಿದೆ.

” ಪರಿಸರ ಸ್ನೇಹಿ  ಗಣಪತಿ ಮೂರ್ತಿಗಳನ್ನೇ ಜನಸಾಮಾನ್ಯರು ಕೂರಿಸಿ ಪೂಜೆ ಸಲ್ಲಿಸಬೇಕು. ಈ ಮೂಲಕ ಸರ್ಕಾರದ ಮತ್ತು ಪುರಸಭೆಯ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸ ಬೇಕು. ಸ್ವಚ್ಛತೆ ಕಾಪಾಡಬೇಕು. ಗಣಪತಿ ಮೂರ್ತಿ ಕೂರಿಸುವ ಸಂಘ ಸಂಸ್ಥೆಯವರು ಪುರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಗಣಪತಿ ಮೂರ್ತಿಗಳ ವಿಸರ್ಜನೆಗಾಗಿ ಪಟ್ಟಣದ ಸಂತೆ ಮೈದಾನದಲ್ಲಿ ನೀರಿನ ಕೊಳವನ್ನು ಪುರಸಭೆ ವತಿಯಿಂದ ಸಜ್ಜುಗೊಳಿಸಲಾಗಿದೆ.”

-ಶಿವಮ್ಮ ಚಾಕಹಳ್ಳಿ ಕೃಷ್ಣ, ಅಧ್ಯಕ್ಷರು ಪುರಸಭೆ

” ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗಣಪತಿ ಮೂರ್ತಿಯನ್ನು ಕೂರಿಸುವವರು ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯಲೇಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಡಿಜೆ, ಇನ್ನಿತರ ಅತಿ ಹೆಚ್ಚು ಶಬ್ದ ಮಾಡುವ ಧ್ವನಿವರ್ಧಕಗಳನ್ನು ಬಳಸಬಾರದು. ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸ ಬೇಕೆಂದು ಈಗಾಗಲೇ ವಿವಿಧ ಸಮುದಾಯಗಳ ಮುಖಂಡರನ್ನು ಕರೆದು ಸಭೆ ನಡೆಸಲಾಗಿದೆ. ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.”

-ಗಂಗಾಧರ್, ಸರ್ಕಲ್ ಇನ್‌ಸ್ಪೆಕ್ಟರ್

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

3 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

6 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

7 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

8 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

8 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

8 hours ago