Andolana originals

ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹಕೆ ಸಿದ್ಧತೆ

ಮಹಾದೇಶ್ ಎಂ.ಗೌಡ

ಈ ಬಾರಿ ೯೫ ಜೋಡಿಗಳು ನೋಂದಣಿ; ಸಿಎಂ, ಡಿಸಿಎಂ, ಸಚಿವರು ಭಾಗಿ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.೧೮ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ೯೫ ಜೋಡಿಗಳು ಹಸಮಣೆ ಏರಲಿದ್ದು, ಇದಕ್ಕಾಗಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆ ಭರದಿಂದ ಸಾಗಿದೆ.

ಮ.ಬೆಟ್ಟದಲ್ಲಿ ನಡೆಯಲಿರುವ ಸಾಮೂಹಿಕ ವಿವಾಹಕ್ಕೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಮಂಗಳವಾರ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಭೇಟಿ ಮಾಡಿ, ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ಪತ್ರಿಕೆ ನೀಡಿ ಮನವಿ ಮಾಡಿದರು.

ಇಲ್ಲಿ ನಡೆಯುವ ಸಾಮೂಹಿಕ ವಿವಾಹದಲ್ಲಿ ಪ್ರತಿ ವರ್ಷವೂ ಹೆಚ್ಚು ಜೋಡಿಗಳು ಅದರಲ್ಲೂ ಬಡ ಕುಟುಂಬಗಳಿಗೆ ಸೇರಿದ ವಧು-ವರರು ವಿವಾಹವಾಗುತ್ತಾರೆ. ಈ ಕಾರ್ಯಕ್ಕೆ ಪ್ರಾಧಿಕಾರ ಅವಕಾಶ ಕಲ್ಪಿಸಿ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದೆ.

ಅಂದಿನ ಶ್ರೀ ಮಹದೇಶ್ವರ ಸ್ವಾಮಿ ಆಡಳಿತ ಮಂಡಳಿ ಸರಳ ವಿವಾಹವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ೧೯೮೯ರಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಪ್ರಾರಂಭಿಸಿತು. ಅಂದಿನಿಂದ ಈವರೆಗೂ ಮುಂದುವರಿಸಿಕೊಂಡು ಬರಲಾಗಿದೆ. ಇದಕ್ಕೆ ಪ್ರಾಽಕಾರ ಪ್ರತಿ ವರ್ಷವೂ ಹೆಚ್ಚಿನ ಒತ್ತು ನೀಡುತ್ತಿದೆ. ಇದರಿಂದ ಬಡವರಿಗೆ, ಹಿಂದುಳಿದ ವರ್ಗದವರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದ್ದು, ವರದಾನ ವಾಗಿದೆ. ಆ.೧೮ರಂದು ೯೫ ಜೋಡಿಗಳಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಅವರು ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಬಾರಿ ವಿವಾಹದಲ್ಲಿ ೧೦೦ಕ್ಕೂ ಹೆಚ್ಚು ಜೋಡಿಗಳು ಭಾಗವಹಿಸಬೇಕು ಎಂಬ ಆಶಯದೊಂದಿಗೆ ತಮಿಳುನಾಡು , ಚಾ.ನಗರ, ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೊಡಗು ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದರು. ಒಟ್ಟು ೯೫ ಜೋಡಿಗಳು ನೋಂದಣಿ ಮಾಡಿಕೊಂಡಿವೆ. ಇದು ೧೫ ವರ್ಷಗಳ ಅವಧಿಯಲ್ಲೇ ದಾಖಲೆಯಾಗಿದ್ದು, ಪ್ರಾಧಿಕಾರ ಕೈಗೊಂಡ ಶ್ರಮಕ್ಕೆ ಸಂದ ಪ್ರತಿಫಲವಾಗಿದೆ.

ಸಕಲ ಸಿದ್ಧತೆ: ಮಾದಪ್ಪನ ದೇಗುಲ ಮುಂಭಾಗದ ರಂಗಮಂದಿರದಲ್ಲಿ ಆ.೧೮ರಂದು ಬೆಳಿಗ್ಗೆ ೯.೨೦ರಿಂದ ೧೦.೧೦ರೊಳಗೆ ಸಾಮೂಹಿಕ ವಿವಾಹ ನಡೆಯಲಿದ್ದು, ವಧುವಿಗೆ ಚಿನ್ನದ ತಾಳಿ, ಬೆಳ್ಳಿ ಕಾಲುಂಗುರ, ಸೀರೆ, ರವಿಕೆ ಹಾಗೂ ವರನಿಗೆ ಪಂಚೆ, ಷರ್ಟ್, ಟವಲ್ ಹಾಗೂ ಪೇಟವನ್ನು ನೀಡಲಾಗುತ್ತದೆ.

ವಧು, ವರರು ಸೇರಿದಂತೆ ಜತೆಯಲ್ಲಿ ಆಗಮಿಸುವ ಬಂಧುಗಳಿಗೆ ತಂಗಲು ವ್ಯವಸ್ಥೆ, ದಾಸೋಹ ಭವನದಲ್ಲಿ ವಿಶೇಷ ಊಟದ ವ್ಯವಸ್ಥೆ ಮಾಡಿ, ದೇಗುಲವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನೆರವೇರಲಿದೆ. ಕಾರ್ಯಕ್ರಮದ ಉದ್ಘಾಟನೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತಿ ಇರಲಿದ್ದಾರೆ. ನೂತನ ವಧುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾಂಗಲ್ಯ ವಿತರಣೆ ಮಾಡಲಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಧು- ವರರಿಗೆ ವಸ್ತ್ರ ವಿತರಿಸಲಿದ್ದು, ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

” ಸಾಮೂಹಿಕ ವಿವಾಹಕ್ಕೆ ಚಾ.ನಗರ ಜಿಲ್ಲೆಯಿಂದ ೫೫, ಮೈಸೂರಿನಿಂದ ೧೩. ಮಂಡ್ಯದಿಂದ ೧೧, ಬೆಂಗಳೂರು ದಕ್ಷಿಣದಿಂದ ೩, ರಾಮನಗರ ಜಿಲ್ಲೆಯಿಂದ ೨, ವಿಜಯಪುರ, ಶಿವಮೊಗ್ಗ, ಕೊಡಗು ಹಾಗೂ ಇನ್ನಿತರ ಜಿಲ್ಲೆಗಳಿಂದ ಹಾಗೂ ತಮಿಳುನಾಡಿನಿಂದ ೩ ಜೋಡಿಗಳು ಸೇರಿದಂತೆ ಒಟ್ಟು ೯೫ ಜೋಡಿಗಳು ನೋಂದಣಿಯಾಗಿದ್ದಾರೆ. ಇದರಲ್ಲಿ ೧೬ ಜೋಡಿಗಳು ಅಂತರ್ಜಾತಿ ವಿವಾಹವಾಗಲಿದ್ದಾರೆ ಎಂದು ತಿಳಿದು ಬಂದಿದೆ.”

” ಉಚಿತ ಸಾಮೂಹಿಕ ವಿವಾಹಕ್ಕೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೂ ಆಹ್ವಾನ ನೀಡಲಾಗಿದೆ. ಸಾಮೂಹಿಕ ವಿವಾಹಕ್ಕೆ ನೋಂದಣಿಯಾಗಿರುವ ವಧುವಿಗೆ ಚಿನ್ನದ ತಾಳಿ, ಕಾಲುಂಗುರ, ಸೀರೆ, ರವಿಕೆ ಹಾಗೂ ವರನಿಗೆ ಪಂಚೆ, ಷರ್ಟ್, ಶಲ್ಯವನ್ನು ಈಗಾಗಲೇ ಖರೀದಿಸಲಾಗಿದೆ. ಚಪ್ಪರ ನಿರ್ಮಾಣ ಹಾಗೂ ಪೂಜಾ ಕೈಂಕರ್ಯಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.”

ಎ.ಇ.ರಘು ಕಾರ್ಯದರ್ಶಿ, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ

ಆಂದೋಲನ ಡೆಸ್ಕ್

Recent Posts

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

13 mins ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

46 mins ago

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…

1 hour ago

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…

1 hour ago

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

2 hours ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

2 hours ago