Andolana originals

ಮಡಿಕೇರಿಯಲ್ಲಿ ಬಂಟರ ಭವನ ನಿರ್ಮಾಣಕ್ಕೆ ಸಿದ್ಧತೆ

ನವೀನ್ ಡಿಸೋಜ

೧೨ ರಿಂದ ೧೫ ಕೋಟಿ ರೂ.ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ೦.೫೨ ಎಕರೆ ಜಾಗ 

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಸುಮಾರು ೧೨ರಿಂದ ೧೫ ಕೋಟಿ ರೂ. ವೆಚ್ಚದಲ್ಲಿ ಬಂಟರ ಸಮುದಾಯ ಭವನ ನಿರ್ಮಾಣವಾಗಲಿದ್ದು, ಶುಕ್ರವಾರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಲಿದೆ.

ಕೊಡಗು ಜಿಲ್ಲೆಯಲ್ಲಿ ಸುಸಜ್ಜಿತವಾದ ಬಂಟರ ಭವನ ನಿರ್ಮಾಣವಾಗಬೇಕೆಂಬುದು ಸಮುದಾಯದವರ ಹಲವು ವರ್ಷಗಳ ಕನಸಾಗಿತ್ತು. ಈ ಕನಸು ಈಗ ನನಸಾಗುತ್ತಿದ್ದು, ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಕೊಡಗು ಬಂಟರ ಭವನ ನಿರ್ಮಾಣಕ್ಕೆ ತಯಾರಿ ನಡೆಸಲಾಗಿದೆ.

ದಾನಿ ದಿ. ಡಾ. ಬಿ.ಟಿ. ಪ್ರೇಮನಾಥ್ ಪೂಂಜಾ ಅವರು ಭವನ ನಿರ್ಮಾಣಕ್ಕಾಗಿ ೦.೫೨ ಎಕರೆ ಜಾಗವನ್ನು ದಶಕದ ಹಿಂದೆಯೇ ದಾನವಾಗಿ ನೀಡಿದ್ದರು. ಅದೇ ಸ್ಥಳದಲ್ಲಿ ಆಧುನಿಕ ಶೈಲಿಯಲ್ಲಿ ಸುಸಜ್ಜಿತ ಭವನ ನಿರ್ಮಾಣಕ್ಕೆ ಚಿಂತನೆ ನಡೆದಿತ್ತು. ಆದರೆ, ಕಾಮಗಾರಿ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಸುಸಜ್ಜಿತ ಭವನ ನಿರ್ಮಾಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಸ್ಥಳದಲ್ಲಿ ಮಣ್ಣು ತೆಗೆದು ಸಮತಟ್ಟು ಮಾಡುವ ಕೆಲಸ ನಡೆಸಲಾಗಿದೆ. ಒಂದು ತಿಂಗಳಿನಿಂದ ಕಾಮಗಾರಿ ಸಂಬಂಧ ಸಿದ್ಧತಾ ಕೆಲಸ ನಡೆಯುತ್ತಿದೆ. ಆದಷ್ಟು ಶೀಘ್ರದಲ್ಲಿ ಬಂಟರ ಭವನದ ಕಾಮಗಾರಿಯನ್ನು ಆರಂಭಿಸಿ ಪೂರ್ಣಗೊಳಿಸಲು ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘ ನಿರ್ಧರಿಸಿವೆ.

ಮೇ ೧ರಂದು ಬೆಳಿಗ್ಗೆ ೧೧ ಗಂಟೆಗೆ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯಲಿದ್ದು, ೨,೦೦೦ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂಥರ್‌ಗೌಡ ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕ್ಯಾ.ಬ್ರಿಜೇಶ್ ಚೌಟ, ಎಂಎಲ್‌ಸಿ ಸುಜಾ ಕುಶಾ ಲಪ್ಪ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಹೀಗಿರಲಿದೆ ಭವನ..!: 

ಒಟ್ಟು ನಾಲ್ಕು ಅಂತಸ್ತುಗಳಲ್ಲಿ ಭವನ ನಿರ್ಮಾಣವಾಗಲಿದೆ. ನೆಲಮಾಳಿಗೆಯಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತದೆ. ಒಂದು ಮಹಡಿಯಲ್ಲಿ ಭೋಜನಾಲಯ, ಮತ್ತೊಂದು ಮಹಡಿಯಲ್ಲಿ ಸುಮಾರು ೮೦೦ ಮಂದಿ ಆಸೀನರಾಗಲು ಸಾಧ್ಯವಾಗುವ ಸಭಾಂಗಣವನ್ನು ಅತ್ಯಾಧುನಿಕ ಶೈಲಿಯಲ್ಲಿ ನಿರ್ಮಿಸಲಾಗುತ್ತದೆ. ಉಳಿದ ಒಂದು ಮಹಡಿಯಲ್ಲಿ ಕೋಣೆಗಳನ್ನು ನಿರ್ಮಿಸಲಾಗುತ್ತದೆ ಎಂದು ಬಂಟರ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್ ರೈ ತಿಳಿಸಿದ್ದಾರೆ.

” ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ಕೊಡಗು ಬಂಟರ ಭವನ ನಿರ್ಮಾಣ ಕಾಮಗಾರಿಗೆ ಮೇ ೧ರಂದು ೧೧ ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ದಿವಂಗತ ಪ್ರೇಮನಾಥ್ ಪೂಂಜಾ ಅವರಿಗೆ ಮರಣೋತ್ತರವಾಗಿ ವಿಶೇಷ ಬಿರುದು ಪ್ರದಾನ ಮಾಡಲಾಗುವುದು.”

-ಬಿ.ಡಿ. ಜಗದೀಶ್ ರೈ, ಕೊಡಗು ಜಿಲ್ಲಾ ಬಂಟರ ಸಂಘದ ಜಿಲ್ಲಾಧ್ಯಕ್ಷರು

 

 

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

4 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

4 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

6 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

8 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

11 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

11 hours ago