dasara short filam (1)
ನವೀನ್ ಡಿಸೋಜ
ಸೆ.೫ರವರೆಗೆ ನೋಂದಣಿಗೆ ಕಾಲಾವಕಾಶ; ಕೊಡಗಿನ ಮೊದಲ ಕಾನೂನು ಕಾಲೇಜು ಎಂಬ ಹೆಗ್ಗಳಿಕೆ
ಮಡಿಕೇರಿ: ಕೊಡಗು ಜಿಲ್ಲೆಗೆ ಬಹು ಬೇಡಿಕೆಯಾಗಿದ್ದ ಕಾನೂನು ಕಾಲೇಜು ಆರಂಭಕ್ಕೆ ಸಿದ್ಧತೆ ನಡೆದಿದ್ದು, ನೋಂದಣಿಗೆ ಸೆ.೫ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿ ಅಽನದಲ್ಲಿ ಕೆವಿಕೆ ಟ್ರಸ್ಟ್ ಸಹಯೋಗದೊಂದಿಗೆ ಕಾವೇರಿ ಇನ್‌ಸ್ಟಿಟ್ಯೂಟ್ ಆಫ್ ಲಾ ವಿರಾಜಪೇಟೆಯಲ್ಲಿರುವ ಕಾವೇರಿ ಕಾಲೇಜಿನಲ್ಲಿ ಆರಂಭಗೊಳ್ಳಲಿದೆ. ಆರಂಭದಲ್ಲಿ ೬೦ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ಮುಂದಾಗಿದ್ದು, ಆ.೨೮ರೊಳಗೆ ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ನೋಂದಣಿ ಮಾಡಿಕೊಳ್ಳಲು ಸೆ.೫ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಜಿಯಲ್ಲಿ ಇಂಜಿನಿಯರಿಂಗ್, ಡೆಂಟಲ್, ಮೆಡಿಕಲ್ ಕಾಲೇಜು ಸೇರಿದಂತೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಿಕ್ಷಣ ದೊರೆಯುತ್ತಿದ್ದು, ಇದೀಗ ಕಾನೂನು ಪದವಿ ಕೂಡ ಸಿಗುವಂತಾಗಿದೆ. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದರಿಂದ ಹೆಚ್ಚು ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆಯಲು ಸೇರುವ ಸಾಧ್ಯತೆ ಹೆಚ್ಚಾಗಿದೆ.
ಮೂರು ವರ್ಷಗಳ ಕಾನೂನು ಪದವಿ ಕಾಲೇಜನ್ನು ನೂತನವಾಗಿ ಪ್ರಾರಂಭಿಸಲಾಗಿದೆ. ಇದಕ್ಕೆ ಸಂಬಂಽಸಿದಂತೆ ರಾಜ್ಯ ಸರ್ಕಾರ ಮತ್ತು ಬಾರ್ ಕೌನ್ಸಿಲ್‌ನ ಅನುಮತಿಯನ್ನು ಪಡೆದುಕೊಳ್ಳಲಾಗಿದೆ. ಕಾನೂನು ಕಾಲೇಜು, ಹುಬ್ಬಳಿಯ ಕರ್ನಾಟಕ ರಾಜ್ಯ ಕಾನೂನು ಮಹಾ ವಿಶ್ವವಿದ್ಯಾನಿಲಯದ ಮಾನ್ಯತೆಗೊಳಪಟ್ಟಿದ್ದು, ದಿಲ್ಲಿಯ ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆಗೊಂಡಿದೆ. ಇದೇ ಶೈಕ್ಷಣಿಕ ವರ್ಷದಿಂದ ೩ ವರ್ಷಗಳ ಕಾನೂನು ಪದವಿ ಕೋರ್ಸ್‌ಗಳಿಗೆ ದಾಖಲಾತಿ ಪ್ರಾರಂಭಿಸಲಾಗಿದೆ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನಿಗದಿಪಡಿಸಿರುವಂತೆ ಪ್ರವೇಶಾತಿ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ತರಗತಿಗಳು ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಾರಂಭವಾಗಲಿವೆ.
ಮೂರು ವರ್ಷಗಳ ಕಾನೂನು ಪದವಿ ಶಿಕ್ಷಣವನ್ನು ಅತ್ಯಾಧುನಿಕ ಸೌಲಭ್ಯದೊಂದಿಗೆ ನುರಿತ ಉಪನ್ಯಾಸಕರು, ಸುಸಜ್ಜಿತ ಗ್ರಂಥಾಲಯ ಸೌಲಭ್ಯ, ಮಾದರಿ ಕೋರ್ಟ್, ಇಂಟರ್ನ್‌ಶಿಪ್ ಸಹಾಯ, ಪ್ರಾಯೋಗಿಕ ತರಗತಿಗಳು, ಕರ್ನಾಟಕ ಲಾ ಅಕಾಡೆಮಿ ಇವರೊಂದಿಗೆ ಆನ್‌ಲೈನ್ ಉಪನ್ಯಾಸಗಳು, ವಸತಿ ನಿಲಯ, ಬಸ್ ಸೌಲಭ್ಯ ಇನ್ನಿತರ ಸೌಲಭ್ಯಗಳನ್ನು ಒದಗಿಸಲಾಗಿದೆ. ಕೊಡಗು ಹಾಗೂ ಅಕ್ಕಪಕ್ಕದ ಜಿಗಳ ವಿದ್ಯಾರ್ಥಿಗಳು ಈ ಕಾನೂನು ಕಾಲೇಜಿನ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದ್ದು, ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಪ್ರವೇಶಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ಸಂ.೮೭೯೨೮೩೯೧೭೬, ೯೮೪೪೨೩೧೧೯೧ ಸಂಪರ್ಕಿಸಬಹುದಾಗಿದೆ.
ಕಾವೇರಿ ಎಜುಕೇಷನ್ ಸೊಸೈಟಿ ಹಿನ್ನೆಲೆ…:
ದಕ್ಷಿಣ ಕೊಡಗಿನಲ್ಲಿ ಕಾವೇರಿ ಎಜುಕೇಷನ್ ಸೊಸೈಟಿ ಅಧಿನದಲ್ಲಿ ಗೋಣಿಕೊಪ್ಪ ಮತ್ತು ವಿರಾಜಪೇಟೆಯಲ್ಲಿ ಕಾಲೇಜು ಶಿಕ್ಷಣ ನೀಡಲಾಗುತ್ತಿದೆ. ಪದವಿಪೂರ್ವ, ಪದವಿ, ಪಾಲಿಟೆಕ್ನಿಕ್, ವಿರಾಜಪೇಟೆಯಲ್ಲಿ ಪದವಿಪೂರ್ವ, ಪದವಿ ಕಾಲೇಜು ಶಿಕ್ಷಣ ಕಲ್ಪಿಸುತ್ತಾ ಬಂದಿದೆ. ಈಗಾಗಲೇ ೫೦ ವರ್ಷಗಳನ್ನು ಪೂರೈಸಿರುವ ಸಂಸ್ಥೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ಪಡೆಯಲು ಮೂಲ ಸಂಸ್ಥೆಯಾಗಿದ್ದು, ಹಿರಿಯ ಶಿಕ್ಷಣ ಪ್ರೇಮಿಗಳ ಉತ್ಸಾಹದಿಂದ ಸಂಸ್ಥೆ ಹಂತ ಹಂತವಾಗಿ ಬೆಳವಣಿಗೆ ಕಂಡಿದೆ. ಇಲ್ಲಿ ಪದವಿ ಶಿಕ್ಷಣದೊಂದಿಗೆ ಸ್ನಾತಕೋತರ ಶಿಕ್ಷಣ ಕೂಡ ದೊರೆಯುತ್ತಿದೆ. ಇದರಿಂದಾಗಿ ಸ್ಥಳೀಯ ಕಾಫಿ ಬೆಳೆಗಾರರು, ಕಾರ್ಮಿಕ ವರ್ಗದ ಮಕ್ಕಳು ಕೂಡ ಇಲ್ಲಿ ಉತ್ತಮ ಶಿಕ್ಷಣ ಪಡೆದುಕೊಂಡು ಹುz ಪಡೆದುಕೊಂಡಿದ್ದಾರೆ. ಸರ್ಕಾರಿ, ಸಾಮಾಜಿಕ ಸೇವೆ, ಸೇನೆಯಲ್ಲೂ ಕೂಡ ಇಲ್ಲಿನ ವಿದ್ಯಾರ್ಥಿಗಳು ಸೇವೆ ಸಲ್ಲಿಸುತ್ತಿzರೆ.
” ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಾನೂನು ಶಿಕ್ಷಣ ನೀಡುವಲ್ಲಿ ಕಾವೇರಿ ಎಜುಕೇಷನ್ ಸೊಸೈಟಿ ಮುಂದಾಗಿದೆ. ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ವಿರಾಜಪೇಟೆಯ ಕಾವೇರಿ ಕಾಲೇಜು ಆವರಣದಲ್ಲಿ ಕೆ.ವಿ.ವಿ ಎಜುಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ೩ ವರ್ಷಗಳ ಅವಧಿಯ ಕಾನೂನು ಪದವಿ ಕೋರ್ಸ್ ಆರಂಭವಾಗಲಿದೆ. ಇದಕ್ಕೆ ರಾಜ್ಯ ಸರ್ಕಾರ ಮತ್ತು ಬಾರ್ ಕೌನ್ಸಿಲ್ ಅನುಮತಿ ಪಡೆಯಲಾಗಿದೆ.”
-ಸುಗುಣ ಮುತ್ತಣ್ಣ, ಅಧ್ಯಕ್ಷರು, ಗೋಣಿಕೊಪ್ಪ ಕಾವೇರಿ
” ಎಜುಕೇಷನ್ ಸೊಸೈಟಿ ಆಸಕ್ತ ವಿದ್ಯಾರ್ಥಿಗಳು ಸೆ.೫ರೊಳಗೆ ಕಾನೂನು ಪದವಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ರಿಯಾಯಿತಿ ಇದೆ. ಜತೆಗೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನಿರ್ಧಾರವೇ ಅಂತಿಮವಾಗಲಿದೆ. ಜಿಲ್ಲೆಯ ವಿದ್ಯಾರ್ಥಿಗಳು ಕಾನೂನು ಪದವಿ ಕೋರ್ಸ್‌ನ ಸದುಪಯೋಗ ಪಡೆದುಕೊಳ್ಳುವಂತಾಗಬೇಕು.”
-ಜಿ.ಎನ್.ನಾಗೇಂದ್ರ, ಅಧ್ಯಕ್ಷರು, ಕೆ.ವಿ.ವಿ. ಎಜುಕೇಷನಲ್ ಟ್ರಸ್ಟ್
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…