Preparations to start LKG and UKG in Anganwadis
ಪ್ರಸಾದ್ ಲಕ್ಕೂರು
ಜಿಲ್ಲೆಯ ೨೩೩ ಕೇಂದ್ರಗಳ ಗುರುತು; ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ
ಚಾಮರಾಜನಗರ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಕ್ಟೋ ಬರ್ ವೇಳೆಗೆ ರಾಜ್ಯಾದ್ಯಂತ ೪ ಸಾವಿರಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ತರಗತಿಗಳನ್ನು (ಎಲ್ಕೆಜಿ, ಯುಕೆಜಿ) ಆರಂಭಿಸಲು ನಿರ್ಧರಿಸಿದ್ದು, ಜಿಲ್ಲೆಯಲ್ಲಿ ೨೩೩ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರತ್ಯೇಕ ಇಲಾಖೆಯಾಗಿ ರೂಪುಗೊಂಡು ಅಕ್ಟೋಬರ್ ೨ಕ್ಕೆ ೫೦ ವರ್ಷಗಳನ್ನು ಪೂರೈಸುತ್ತಿದೆ. ಈ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ ೪ ಸಾವಿರಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಇಲಾಖೆ ಮುಂದಾಗಿದೆ. ಆಧುನಿಕತೆಗೆ ತಕ್ಕಂತೆ ಮಕ್ಕಳ ಕಲಿಕೆಗಾಗಿ ಸ್ಮಾರ್ಟ್ ಟಿವಿಗಳು ಹಾಗೂ ಕಲಿಕಾ ಪರಿಕರಗಳ ಖರೀದಿಗೆ ಸಿದ್ಧತೆ ನಡೆದಿದೆ. ಜತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಯನ್ನು ನೀಡಲಾಗಿದೆ. ಒಂದಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳು ಇರುವ ಕಡೆ ಎಲ್‌ಕೆಜಿ, ಯುಕೆಜಿ ಆರಂಭಿಸಲು ಆದ್ಯತೆ ನೀಡಲಾ ಗಿದೆ. ಜಿಲ್ಲೆಯಲ್ಲಿ ೧,೪೪೪ ಅಂಗನವಾಡಿ ಕೇಂದ್ರಗಳಿವೆ. ಸುಮಾರು ೮೦೦ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಅರಂಭಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ೨೩೩ ಕೇಂದ್ರಗಳಲ್ಲಿ ಆರಂಭಿಸಲು ಇಲಾಖೆಯ ಮೇಲಧಿಕಾರಿಗಳು ಗುರಿ ನೀಡಿದ್ದಾರೆ.
ಪ್ರತಿ ಅಂಗನವಾಡಿಗಳಲ್ಲಿ ತಲಾ ಒಬ್ಬರು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಿದರೂ ಪ್ರತ್ಯೇಕವಾಗಿ ಸಿಬ್ಬಂದಿ ಯನ್ನು ನೇಮಿಸುವುದಿಲ್ಲ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಪಿಯುಸಿ ಹಾಗೂ ಪದವಿ ಓದಿರುವ ಕಾರ್ಯಕರ್ತೆಯರ ಮೂಲಕವೇ ಮಕ್ಕಳಿಗೆ ಶಿಕ್ಷಣ ನೀಡಲು ಇಲಾಖೆ ತೀರ್ಮಾನಿಸಿದೆ. ಈಗಾಗಲೇ ಜಿಲ್ಲೆಯ ೧,೪೪೪ ಅಂಗನವಾಡಿ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಕಾರ್ಯಕರ್ತೆಯರಿಗೆ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಪಾಠ ಮಾಡುವ ಬಗ್ಗೆ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ ತರಬೇತಿ ಕೊಡಿಸಲಾಗಿದೆ.
ಎಲ್‌ಕೆಜಿ, ಯುಕೆಜಿ ಓದುವ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ ಕೊಡಿಸಲು ಖಾಸಗಿ ಕಂಪೆನಿಗಳ ಸಿಎಸ್‌ಆರ್ ನಿಧಿ ಪಡೆಯಲು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರು ಆಸಕ್ತಿ ತೋರಿದ್ದಾರೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ತಾಲ್ಲೂಕುವಾರು ಕೇಂದ್ರಗಳ ವಿವರ:
ಚಾಮರಾಜನಗರ ತಾಲ್ಲೂಕಿನಲ್ಲಿ ೬೩, ಸಂತೇಮರಹಳ್ಳಿ ವಿಭಾಗದಲ್ಲಿ ೪೫, ಕೊಳ್ಳೇಗಾಲ ತಾಲ್ಲೂಕಿನಲ್ಲಿ ೬೦, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ೪೫, ಯಳಂದೂರು ತಾಲ್ಲೂಕಿನಲ್ಲಿ ೨೦ ಅಂಗನವಾಡಿ ಕೇಂದ್ರಗಳು ಸೇರಿದಂತೆ ಒಟ್ಟು ೨೩೩ ಕೇಂದ್ರಗಳನ್ನು ಎಲ್‌ಕೆಜಿ, ಯುಕೆಜಿ ತರಗತಿ ತೆರೆಯಲು ಗುರುತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
” ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೂ ಈಗಾಗಲೇ ತರಬೇತಿ ನೀಡಲಾಗಿದೆ. ಪುಸ್ತಕಗಳು ಕೂಡ ಬಂದಿವೆ. ಸರ್ಕಾರ ಆದೇಶ ನೀಡಿದಾಗ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು.”
–ಚೆಲುವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…