Andolana originals

ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿದ್ಧತೆ

ಪ್ರಸಾದ್ ಲಕ್ಕೂರು

ಜಿಲ್ಲೆಯ ೨೩೩ ಕೇಂದ್ರಗಳ ಗುರುತು; ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ

ಚಾಮರಾಜನಗರ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಕ್ಟೋ ಬರ್ ವೇಳೆಗೆ ರಾಜ್ಯಾದ್ಯಂತ ೪ ಸಾವಿರಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ತರಗತಿಗಳನ್ನು (ಎಲ್ಕೆಜಿ, ಯುಕೆಜಿ) ಆರಂಭಿಸಲು ನಿರ್ಧರಿಸಿದ್ದು, ಜಿಲ್ಲೆಯಲ್ಲಿ ೨೩೩ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರತ್ಯೇಕ ಇಲಾಖೆಯಾಗಿ ರೂಪುಗೊಂಡು ಅಕ್ಟೋಬರ್ ೨ಕ್ಕೆ ೫೦ ವರ್ಷಗಳನ್ನು ಪೂರೈಸುತ್ತಿದೆ. ಈ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ ೪ ಸಾವಿರಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಇಲಾಖೆ ಮುಂದಾಗಿದೆ. ಆಧುನಿಕತೆಗೆ ತಕ್ಕಂತೆ ಮಕ್ಕಳ ಕಲಿಕೆಗಾಗಿ ಸ್ಮಾರ್ಟ್ ಟಿವಿಗಳು ಹಾಗೂ ಕಲಿಕಾ ಪರಿಕರಗಳ ಖರೀದಿಗೆ ಸಿದ್ಧತೆ ನಡೆದಿದೆ. ಜತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಯನ್ನು ನೀಡಲಾಗಿದೆ. ಒಂದಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳು ಇರುವ ಕಡೆ ಎಲ್‌ಕೆಜಿ, ಯುಕೆಜಿ ಆರಂಭಿಸಲು ಆದ್ಯತೆ ನೀಡಲಾ ಗಿದೆ. ಜಿಲ್ಲೆಯಲ್ಲಿ ೧,೪೪೪ ಅಂಗನವಾಡಿ ಕೇಂದ್ರಗಳಿವೆ. ಸುಮಾರು ೮೦೦ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಅರಂಭಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ೨೩೩ ಕೇಂದ್ರಗಳಲ್ಲಿ ಆರಂಭಿಸಲು ಇಲಾಖೆಯ ಮೇಲಧಿಕಾರಿಗಳು ಗುರಿ ನೀಡಿದ್ದಾರೆ.

ಪ್ರತಿ ಅಂಗನವಾಡಿಗಳಲ್ಲಿ ತಲಾ ಒಬ್ಬರು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಿದರೂ ಪ್ರತ್ಯೇಕವಾಗಿ ಸಿಬ್ಬಂದಿ ಯನ್ನು ನೇಮಿಸುವುದಿಲ್ಲ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಪಿಯುಸಿ ಹಾಗೂ ಪದವಿ ಓದಿರುವ ಕಾರ್ಯಕರ್ತೆಯರ ಮೂಲಕವೇ ಮಕ್ಕಳಿಗೆ ಶಿಕ್ಷಣ ನೀಡಲು ಇಲಾಖೆ ತೀರ್ಮಾನಿಸಿದೆ. ಈಗಾಗಲೇ ಜಿಲ್ಲೆಯ ೧,೪೪೪ ಅಂಗನವಾಡಿ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಕಾರ್ಯಕರ್ತೆಯರಿಗೆ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಪಾಠ ಮಾಡುವ ಬಗ್ಗೆ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ ತರಬೇತಿ ಕೊಡಿಸಲಾಗಿದೆ.

ಎಲ್‌ಕೆಜಿ, ಯುಕೆಜಿ ಓದುವ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ ಕೊಡಿಸಲು ಖಾಸಗಿ ಕಂಪೆನಿಗಳ ಸಿಎಸ್‌ಆರ್ ನಿಧಿ ಪಡೆಯಲು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರು ಆಸಕ್ತಿ ತೋರಿದ್ದಾರೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕುವಾರು ಕೇಂದ್ರಗಳ ವಿವರ: 

ಚಾಮರಾಜನಗರ ತಾಲ್ಲೂಕಿನಲ್ಲಿ ೬೩,  ಸಂತೇಮರಹಳ್ಳಿ ವಿಭಾಗದಲ್ಲಿ ೪೫, ಕೊಳ್ಳೇಗಾಲ ತಾಲ್ಲೂಕಿನಲ್ಲಿ ೬೦, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ೪೫, ಯಳಂದೂರು ತಾಲ್ಲೂಕಿನಲ್ಲಿ ೨೦ ಅಂಗನವಾಡಿ ಕೇಂದ್ರಗಳು ಸೇರಿದಂತೆ ಒಟ್ಟು ೨೩೩ ಕೇಂದ್ರಗಳನ್ನು ಎಲ್‌ಕೆಜಿ, ಯುಕೆಜಿ ತರಗತಿ ತೆರೆಯಲು ಗುರುತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

” ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೂ ಈಗಾಗಲೇ ತರಬೇತಿ ನೀಡಲಾಗಿದೆ. ಪುಸ್ತಕಗಳು ಕೂಡ ಬಂದಿವೆ. ಸರ್ಕಾರ ಆದೇಶ ನೀಡಿದಾಗ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು.”

–ಚೆಲುವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

1 hour ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

2 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

2 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

3 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

3 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

7 hours ago