ಕೆ.ಬಿ.ರಮೇಶ ನಾಯಕ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಸ್ವಚ್ಛ ಸರ್ವೇಕ್ಷಣೆಯಲ್ಲಿ ಪ್ರತಿ ವರ್ಷ ಹಿಂದುಳಿಯಲು ನಗರದಲ್ಲಿ ಪ್ರತಿನಿತ್ಯ ಮನೆ ಮನೆಗಳಿಂದ ತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಹಾಗೂ ಸಂಸ್ಕರಣೆ ಆಗದೆ ಇರುವುದೇ ಪ್ರಮುಖ ಕಾರಣವಾಗಿದ್ದು, ಈ ಸಮಸ್ಯೆಗೆ ಉತ್ತರ ಕಂಡುಕೊಳ್ಳಲು ನಗರ ಪಾಲಿಕೆಯು ಇದೀಗ ತ್ಯಾಜ್ಯವನ್ನು ಬಳಸಿಕೊಂಡು ಕಂಪ್ರೆಸ್ಡ್ ಬಯೋಗ್ಯಾಸ್ ತಯಾರಿಸುವ ಯೋಜ ನೆಗೆ ಮುಂದಾಗಿದೆ.
ನಗರ ಪಾಲಿಕೆ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಸಹಯೋಗದಲ್ಲಿ ನಗರದ ಸಿವೇಜ್ ಫಾರ್ಮ್‌ನಲ್ಲಿ ಬಯೋಗ್ಯಾಸ್ ಘಟಕ ನಿರ್ಮಾಣಗೊಳ್ಳಲಿದೆ.
ಸಿವೇಜ್ ಫಾರ್ಮ್‌ನಲ್ಲಿ ನಿತ್ಯ ೧೫೦ ಟನ್‌ಗಳಷ್ಟು ತ್ಯಾಜ್ಯವನ್ನು ಬಳಕೆ ಮಾಡಿಕೊಂಡು ಬಯೋಗ್ಯಾಸ್ ತಯಾರಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ಮಹತ್ವದ ಯೋಜನೆ ಜಾರಿಗೆ ಸಂಬಂಽಸಿದಂತೆ ಇತ್ತೀಚೆಗೆ ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರೊಂದಿಗೆ ಬಿಪಿಸಿಎಲ್ ಅಧಿಕಾರಿಗಳು ಒಡಂಬಡಿಕೆ ಮಾಡಿಕೊಂಡಿದ್ದಾರೆ. ಮನೆ, ಮನೆಗಳಿಂದ ಸಂಗ್ರಹವಾಗುವ ಹಸಿ ತ್ಯಾಜ್ಯವನ್ನು ಶುದ್ಧ, ಸುಸ್ಥಿರ ಇಂಧನವಾಗಿ ಪರಿವರ್ತಿಸುವುದು ಯೋಜನೆಯ ಉದ್ದೇಶವಾಗಿದೆ.
ಬಯೋಗ್ಯಾಸ್ ಉತ್ಪಾದಿಸುವ ಘಟಕ ಸ್ಥಾಪನೆಗೆ ೬೦ ರಿಂದ ೬೬ ಕೋಟಿ ರೂ. ವೆಚ್ಚವಾಗುವ ನಿರೀಕ್ಷೆ ಹೊಂದಲಾಗಿದೆ. ನಗರದಲ್ಲಿ ನಿತ್ಯ ೬೦೦ ಟನ್ ಗಳಷ್ಟು ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ನಗರದ ಸಿವೇಜ್ ಫಾರ್ಮ್ ಕೆಸರೆ ಘಟಕದಲ್ಲಿ ಇದೀಗ ತ್ಯಾಜ್ಯವನ್ನು ಸಂಸ್ಕರಣೆ ಮಾಡಿ ಗೊಬ್ಬರವಾಗಿ ಪರಿವರ್ತಿಸುವ ಘಟಕ ಕಾರ್ಯನಿರ್ವಹಿಸುತ್ತಿದೆ. ಬಯೋಗ್ಯಾಸ್ ಘಟಕ ಪ್ರಾರಂಭವಾದರೆ ತ್ಯಾಜ್ಯ ಸಂಸ್ಕರಣೆಯ ಸಮಸ್ಯೆಗೆ ಮತ್ತಷ್ಟು ಪರಿಹಾರ ದೊರೆಯುವ ಸಾಧ್ಯತೆ ಇದೆ. ಈಗಾಗಲೇ ಕೊಚ್ಚಿ, ತಿರುವನಂತಪುರಂ, ಕೋಝಿ ಕೋಡ್‌ಗಳಲ್ಲಿ ಬಿಪಿಸಿಎಲ್ ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಘಟಕ ನಿರ್ಮಾಣ ಕಾರ್ಯವು ಜುಲೈನಲ್ಲಿಯೇ ಪ್ರಾರಂಭಗೊಳ್ಳುವ ನಿರೀಕ್ಷೆ ಇದ್ದು, ಎರಡು ವರ್ಷಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಸ್ವಚ್ಛ ಸರ್ವೇಕ್ಷಣೆಗೆ ಸಹಕಾರಿ: ನಗರವು ಸ್ವಚ್ಛತೆಯಲ್ಲಿ ರಾಷ್ಟ್ರಮಟ್ಟದಲ್ಲಿ ೨೭ನೇ ಸ್ಥಾನದಲ್ಲಿ ಇದ್ದು, ಮತ್ತೆ ಟಾಪ್ ೧೦ ಸ್ಥಾನಕ್ಕೆ ಮರಳಲು ಇಂತಹ ಉಪಕ್ರಮಗಳ ಅವಶ್ಯವಿದೆ. ಈ ಬಾರಿಯ ಸ್ವಚ್ಛ ಸರ್ವೇಕ್ಷಣೆಯಲ್ಲಿ ತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಹಾಗೂ ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಸ್ವಚ್ಛ ಸರ್ವೇಕ್ಷಣೆಗೆ ಒಟ್ಟು ೧೨,೫೦೦ ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಪೈಕಿ ಬಡಾವಣೆ, ವಾಣಿಜ್ಯ ಪ್ರದೇಶಗಳನ್ನು ನಿತ್ಯ ಶುಚಿಗೊಳಿಸುವುದು ಹಾಗೂ ಇತ್ಯಾದಿಗೆ ೧,೫೦೦ ಅಂಕಗಳು, ತ್ಯಾಜ್ಯದ ವಿಂಗಡಣೆ, ಸಂಗ್ರಹಣೆ ಹಾಗೂ ಸಾಗಾಟಕ್ಕೆ ೧,೦೦೦ ಅಂಕಗಳು ಹಾಗೂ ಘನತ್ಯಾಜ್ಯ ನಿರ್ವಹಣೆಗೆ ೧,೫೦೦ ಅಂಕಗಳನ್ನು ನಿಗದಿಪಡಿಸಲಾಗಿದೆ. ಹಾಗಾಗಿ ತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಹಾಗೂ ಸಂಸ್ಕರಣೆ ಮಾಡುವುದು ಅತ್ಯಂತ ಪ್ರಮುಖವಾದ ವಿಚಾರವಾಗಿದೆ.
ನಗರದ ಸಿವೇಜ್ ಫಾರ್ಮ್‌ನಲ್ಲಿ ಹಳೆಯ ತ್ಯಾಜ್ಯವು ಸಂಸ್ಕರಣೆಯಾಗದೆ ಬೆಟ್ಟದಂತೆ ಬೆಳೆದಿದ್ದು, ಇದನ್ನು ಬಯೋ ಮೈನಿಂಗ್ ಮೂಲಕ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಈ ತ್ಯಾಜ್ಯ ಸಂಪೂರ್ಣವಾಗಿ ತೆರವುಗೊಂಡು ನಗರದಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ತ್ಯಾಜ್ಯ ಆಯಾ ದಿನವೇ ವಿಲೇವಾರಿಯಾದರೆ ತ್ಯಾಜ್ಯದ ಸಮಸ್ಯೆಗೆ ಸಂಪೂರ್ಣ ಪರಿಹಾರ ಕಂಡು ಕೊಳ್ಳಬಹುದು.
ಸ್ವಚ್ಛತೆಗೆ ಇಂದೋರ್ ಮಾದರಿ: ದೇಶದ ನಂ.೧ ಸ್ವಚ್ಛ ನಗರಿಯಾಗಿರುವ ಇಂದೋರ್ ತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಹಾಗೂ ಸಂಸ್ಕರಣೆಯಲ್ಲಿ ದೇಶಕ್ಕೆ ಮಾದರಿಯಾಗಿದೆ. ಇಂದೋರ್‌ನಗರದಲ್ಲಿ ಸಂಗ್ರಹವಾಗುವ ಹಸಿ ತ್ಯಾಜ್ಯದಿಂದ ಬಯೋ ಗ್ಯಾಸ್ ತಯಾರಿಸಲಾಗುತ್ತಿದೆ. ಬಯೋಗ್ಯಾಸ್ ಘಟಕವನ್ನು ಖಾಸಗಿ ಸಂಸ್ಥೆಗೆ ವಹಿಸಲಾಗಿದ್ದು, ಈ ಬಯೋಗ್ಯಾಸ್ ಅನ್ನು ಇಂದೋರ್‌ನ ಸರ್ಕಾರಿ ಸಿಎನ್‌ಜಿ ಬಸ್‌ಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಒಣ ಕಸದಲ್ಲಿ ಪೇಪರ್, ಪ್ಲಾಸ್ಟಿಕ್, ಕಬ್ಬಿಣ, ಗಾಜಿನ ಬಾಟಲಿಗಳನ್ನು ಬೇರ್ಪಡಿಸಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಿಮೆಂಟ್ ಕಂಪೆನಿಗಳಿಗೆ ಪೂರೈಕೆ ಮಾಡಲಾಗುತ್ತಿದ್ದು, ಉಳಿದ ತ್ಯಾಜ್ಯವನ್ನು ಮರುಬಳಕೆ ಮಾಡಲು ಕ್ರಮ ವಹಿಸಲಾಗುತ್ತಿದೆ. ಒಟ್ಟು ೬ ಕಡೆಗಳಲ್ಲಿ ಕಟ್ಟಡ ತ್ಯಾಜ್ಯಗಳನ್ನು (ಡಬ್ರಿಸ್) ವಿಲೇವಾರಿ ಮಾಡಲು ಜಾಗ ಒದಗಿಸಲಾಗಿದ್ದು, ಈ ಕಟ್ಟಡ ತ್ಯಾಜ್ಯದಿಂದ ಟೈಲ್ಸ್ ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರಿಸಿ ಇಂದೋರ್ ಆದಾಯಗಳಿಸುತ್ತಿದೆ. ಮೈಸೂರು ನಗರ ಪಾಲಿಕೆಯ ತಂಡ ೨೦೨೩ರಲ್ಲಿ ಇಂದೋರ್‌ಗೆ ಭೇಟಿ ನೀಡಿ ಅಧ್ಯಯನ ನಡೆಸಿದ ನಂತರ ನಗರದಲ್ಲೂ ಬಯೋಗ್ಯಾಸ್ ಘಟಕ ತೆರೆಯುವ ಉದ್ದೇಶ ಹೊಂದಿತ್ತು. ಇದೀಗ ಬಿಪಿಸಿಎಲ್ ಸಹಯೋಗದೊಂದಿಗೆ ನಗರದಲ್ಲೂ ಬಯೋಗ್ಯಾಸ್ ಘಟಕ ನಿರ್ಮಾಣ ಮಾಡುವ ಕಾಲ ಕೂಡಿ ಬಂದಿದೆ.
” ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವು ಪರಿಣಾಮಕಾರಿಯಾಗಿ ಸಂಸ್ಕರಣೆಯಾಗಬೇಕು ಎಂಬ ಉದ್ದೇಶದೊಂದಿಗೆ ಸಿವೇಜ್ ಫಾರ್ಮ್‌ನಲ್ಲಿ ಬಿಪಿಸಿಎಲ್ ಸಹಯೋಗದೊಂದಿಗೆ ಕಂಪ್ರೆಸ್ಡ್ ಬಯೋಗ್ಯಾಸ್ ಘಟಕ ತೆರೆಯಲು ಉದ್ದೇಶಿಸಲಾಗಿದೆ. ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಿ, ೨ ವರ್ಷಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಇದರಿಂದ ನಗರ ಎದುರಿಸುತ್ತಿರುವ ತ್ಯಾಜ್ಯ ಸಂಸ್ಕರಣೆಯ ಸಮಸ್ಯೆ ಹಂತ ಹಂತವಾಗಿ ಬಗೆಹರಿಯಲಿದೆ.”
ಶೇಖ್ ತನ್ವೀರ್ ಆಸಿಫ್, ನಗರ ಪಾಲಿಕೆ ಆಯುಕ್ತ
ಮಹಾದೇಶ್ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…
ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್ ಹಾಲ್‌ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…
ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…