Mysore
30
overcast clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ ಷೋರೂಂ ಮುಂತಾದ ಕಡೆ ಫುಟ್‌ಪಾತ್ ಮೇಲೆ ವಾಹನಗಳನ್ನು ನಿಲ್ಲಿಸುತ್ತಿದ್ದು ಪಾದಚಾರಿಗಳಿಗೆ ಓಡಾಡಲು ಸಮಸ್ಯೆ ಆಗುತ್ತಿರುವ ಕುರಿತು ಏ.6ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿದ್ದರಿಂದ ಎಚ್ಚೆತ್ತ ನಗರ ಪೊಲೀಸರು ಶುಕ್ರವಾರ ಫುಟಿತ್‌ನಲ್ಲಿ ಬೈಕ್ ಗಳನ್ನು ತೆರವು ಗೊಳಿಸಿದ್ದಾರೆ.

ಈ ಬಗ್ಗೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಎಸ್.ಸುಂದರ್ ರಾಜ್ ಪತ್ರಿಕೆಯೊಂದಿಗೆ ಮಾತನಾಡಿ, ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟಿಸುತ್ತಿರುವ ಸಾರ್ವಜನಿಕ ಸಮಸ್ಯೆಗಳ ಕುರಿತ ವರದಿ ಸಂಬಂಧಪಟ್ಟ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿರುವುದು ಸಂತೋಷದ ವಿಷಯವಾಗಿದ್ದು, ಇದಕ್ಕೆ ಪೊಲೀಸ್‌ ಇಲಾಖೆಯ ಸಹಕಾರ ಇರುತ್ತದೆ ಎಂದು ತಿಳಿಸಿದರು.

Tags:
error: Content is protected !!