ಓದುಗರ ಪತ್ರ
ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪದಲ್ಲಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಕಳೆದೊಂದು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಸರಬರಾಜಾಗದೇ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಬೆಳಗಿನ ವೇಳೆಯಲ್ಲಿ ಬೇರೆ ಕಡೆಯಿಂದ ನೀರು ತರುವುದು ಅನಿವಾರ್ಯವಾಗಿದ್ದು, ಅದಕ್ಕಾಗಿಯೇ ಒಂದೆರಡು ಗಂಟೆ ಸಮಯವನ್ನು ಮೀಸಲಿಡಬೇಕಾಗಿದೆ. ಈ ಬಗ್ಗೆ ವಾಣಿ ವಿಲಾಸ ನೀರು ಸರಬರಾಜು ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಲಿಖಿತವಾಗಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಕಂದಾಯವನ್ನು ಸಮರ್ಪಕವಾಗಿ ಪಾವತಿಸದಿದ್ದರೆ ಕೂಡಲೇ ಸಂಪರ್ಕವನ್ನು ಕಡಿತ ಮಾಡಲಾಗುತ್ತದೆ. ಆದರೆ ನಿಯಮಿತವಾಗಿ ನೀರಿನ ಕಂದಾಯವನ್ನು ಪ್ರತಿತಿಂಗಳು ಪಾವತಿಸುತ್ತಿದ್ದರೂ ಇಲ್ಲಿನ ನಿವಾಸಿಗಳಿಗೆ ನೀರಿನ ಬವಣೆ ತಪ್ಪಿಲ್ಲ. ಸಂಬಂಧಪಟ್ಟವರು ಕೂಡಲೇ ರಾಮಸ್ವಾಮಿ ವೃತ್ತದ ಸುತ್ತಮುತ್ತಲಿನ ಸಮೀಪವಿರುವ ಮನೆ ಹಾಗೂ ಕಚೇರಿಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಬಿ.ಎನ್.ಶಶಿಧರ, ಅಡ್ವಕೇಟ್, ಮೈಸೂರು
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…