ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಸುಮಾರು ೫ ಲಕ್ಷದಷ್ಟು ಕಡಿಮೆ ಆಗಿದೆ ಎಂದು ಶಿಕ್ಷಣ ಸಚಿವಮಧು ಬಂಗಾರಪ್ಪ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಇದು ಆತಂಕ ಕಾರಿ ಬೆಳವಣಿಗೆಯಾಗಿದೆ. ಸರ್ಕಾರಿ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಸೇರಿಸದೇ ಇರುವುದಕ್ಕೆ ಹಲವು ಕಾರಣಗಳಿವೆ, ಮುಖ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು ಮೊದಲಾದ ಮೂಲ ಸೌಕರ್ಯಗಳು ಇಲ್ಲದೇ ಇರುವುದು. ಶಿಕ್ಷಕರ ಕೊರತೆ, ಸುಸಜ್ಜಿತ ಕಟ್ಟಡಗಳ ಕೊರತೆಯಿಂದಾಗಿ ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಹಿಂಜರಿಯುತ್ತಿದ್ದಾರೆ. ಸರ್ಕಾರ ಕೂಡಲೇ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳು ಹಾಗೂ ಶಿಕ್ಷಕರನ್ನು ನೇಮಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಿ ಸರ್ಕಾರಿ ಶಾಲೆಗಳನ್ನು ಉಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





