Andolana originals

ಆರೋಪಗಳಿಗೆ ದಾಖಲೆಗಳನ್ನು ಒದಗಿಸಿ

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮಗನನ್ನು ರಾಜಕೀಯ ವಾಗಿ ಬೆಳೆಸುವ ಸಲುವಾಗಿ ನಿನ್ನ ಸಹೋದರ ರೇವಣ್ಣ ಅವರ ಮಕ್ಕಳನ್ನೇ ಜೈಲಿಗೆ ಕಳುಹಿಸಿದ್ದು ಯಾರು?’ ಎಂದು ಏಕವಚನದಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ, ಮಾರನೇ ದಿನ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ‘ರಾಜ್ಯದ ಹೆಸರಾಂತ ಉದ್ಯಮಿ ಕಾಫಿ ಡೇ ಮಾಲೀಕರಾದ, ಸಿದ್ದಾರ್ಥರವರ ಸಾವಿಗೆ ಕಾರಣ ಯಾರು ಶಿವಕುಮಾರ್ ಅವರೇ’ ಎಂದು ಪ್ರಶ್ನಿಸಿದ್ದಾರೆ.

ಈ ಇಬ್ಬರೂ ನಾಯಕರೂ ತಮ್ಮ ವೈಯಕ್ತಿಕ ದ್ವೇಷವನ್ನು ತೀರಿಸಿಕೊಳ್ಳುವ ಸಲುವಾಗಿ ಸಾರ್ವಜನಿಕ ವೇದಿಕೆಗಳ ಮೇಲೆ ಈ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುವುದು ಸರಿಯೇ? ಜವಾ ಬ್ದಾರಿಯುತ ಸ್ಥಾನದಲ್ಲಿರುವ ಈ ಇಬ್ಬರೂ ನಾಯಕರಿಗೆ ಸಾರ್ವಜನಿಕರ ಎದುರು ಹೇಗೆ ಮಾತನಾಡಬೇಕು ಎಂಬುದು ತಿಳಿದಿಲ್ಲವೇ? ಈ ರೀತಿಯ ಗಂಭೀರ ಆರೋಪಗಳನ್ನು ಮಾಡುವವರು ಆರೋಪಗಳನ್ನು ಸಾಬೀತು ಮಾಡಲು ಸಾಕ್ಷಾಧಾರಗಳನ್ನು ಒದಗಿಸ ಬೇಕಲ್ಲವೇ? ಅದನ್ನು ಏಕೆ ಮಾಡುವುದಿಲ್ಲ.

ಕೇವಲ ತಮ್ಮ ರಾಜಕೀಯ ಹಿತಕ್ಕಾಗಿ ಸುಳ್ಳು ಆರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡುವುದರಿಂದ ಯಾವುದೇ ಲಾಭವಿಲ್ಲ. ಮುಂದಿನ ದಿನಗಳಲ್ಲಿ ಈ ಆರೋಪಗಳು ಅವರವರಿಗೇ ತಿರುಗುಬಾಣವಾಗಬಹುದು.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

20 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

20 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago