Mysore
29
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಒದಗಿಸಿ

ಓದುಗರ ಪತ್ರ

ಇತ್ತೀಚೆಗೆ ಎಲ್ಲೆಡೆ ಖಾಸಗಿ ವಿದ್ಯಾಸಂಸ್ಥೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಹಳ್ಳಿ ಹಳ್ಳಿಗಳಲ್ಲಿಯೂ ಆಂಗ್ಲ ಮಾಧ್ಯಮ ಶಾಲೆಗಳು ತಲೆ ಎತ್ತುತ್ತಿರುವುದರಿಂದ ಸರ್ಕಾರಿ ಶಾಲೆಗಳು ನಿರ್ಲಕ್ಷ್ಯಕ್ಕೆ ಒಳಗಾಗುತ್ತಿವೆ. ಗುಣಮಟದ ಶಿಕಣ ಕೊಡಿಸಬೇಕು ಎಂದು ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗಿ ಬರಲು ವಾಹನ ಸೌಲಭ್ಯವನ್ನು ಒದಗಿಸುವುದರಿಂದ ಹಿಡಿದು ಎಲ್ಲ ರೀತಿಯ ಮೂಲ ಸೌಕರ್ಯಗಳನ್ನೂ ಕಲ್ಪಿಸುವುದರಿಂದ ಇದಕ್ಕೆ ಮಾರುಹೋದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಂದ ಬಿಡಿಸಿ ಖಾಸಗಿ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆಯ ಜತೆಗೆ ಶಿಕ್ಷಕರ ಕೊರತೆಯೂ ಹೆಚ್ಚಾಗಿರುವುದರಿಂದ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯ ಪ್ರಮಾಣವೂ ಇಳಿಮುಖವಾಗುತ್ತಿದೆ. ಶಾಲಾ ಕಟ್ಟಡಗಳು ಕುಸಿದುಬೀಳುವ ಹಂತದಲ್ಲಿದ್ದರೂ ಸರ್ಕಾರ ಅವುಗಳ ಕಡೆ ಗಮನಹರಿಸದಿರುವುದನ್ನು ನೋಡಿದರೆ, ಸರ್ಕಾರವೇ ಪರೋಕ್ಷವಾಗಿ ಖಾಸಗಿ ಶಾಲೆಗಳನ್ನು ಪೋಷಿಸುತ್ತಿದೆಯೇನೋ ಅನಿಸುತ್ತದೆ. ಬಹುತೇಕ ಖಾಸಗಿ ಶಾಲೆಗಳು ರಾಜಕಾರಣಿಗಳ ಒಡೆತನದಲ್ಲಿದ್ದು, ಲಾಭದಾಯಕ ಉದ್ಯಮವಾಗಿ ಬದಲಾಗುತ್ತಿರುವುದು ಸಾರ್ವಜನಿಕರಲ್ಲಿ ಈ ಅನುಮಾನ ಮೂಡಲು ಕಾರಣವಾಗಿದೆ. ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಸರ್ಕಾರಿ ಶಾಲೆಗಳು ಮುಚ್ಚಿ ಹೋಗಬಹುದು. ಆಗ ಗ್ರಾಮೀಣ ಭಾಗದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಸರ್ಕಾರಿ ಶಾಲೆಗಳ ಸುಧಾರಣೆಗೆ ಕ್ರಮಕೈಗೊಳ್ಳಬೇಕು.
-ಎನ್.ಆರ್.ಚೇತನ್, ನಂಜನಗೂಡು.

Tags:
error: Content is protected !!