ತಿ.ನರಸೀಪುರ ತಾಲ್ಲೂಕಿನ ಚಿದರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೋಳೇಗೌಡನಹುಂಡಿ ಗ್ರಾಮವು ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಗ್ರಾಮದ ಪ್ರಮುಖ ರಸ್ತೆಗಳೇ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಎರಡೂ ಅಂಚುಗಳಲ್ಲಿಯೂ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಗ್ರಾಮದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿಗಳು ಕಟ್ಟಿಕೊಂಡಿದ್ದು, ದುರ್ವಾಸನೆ ಬೀರುತ್ತಿವೆ. ಮಳೆಗಾಲದಲ್ಲಿ ಈ ಚರಂಡಿಗಳು ತುಂಬಿಕೊಳ್ಳುತ್ತಿದ್ದು, ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತದೆ.
ಈ ಅನೈರ್ಮಲ್ಯ ವಾತಾವರಣದಿಂದಾಗಿ ಗ್ರಾಮದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಸಾಂಕ್ರಾಮಿಕಗಳ ರೋಗಗಳ ಭೀತಿ ಎದುರಾಗಿದೆ. ಅಲ್ಲದೆ ಗ್ರಾಮದ ಕೆಲ ವಿದ್ಯುತ್ ಕಂಬಗಳಲ್ಲಿ ಬಲ್ಬಗಳೇ ಇಲ್ಲದೆ ಕತ್ತಲಾಗುತ್ತಿದ್ದಂತೆ ಕಗ್ಗತ್ತಲು ಆವರಿಸುತ್ತದೆ. ಇದರಿಂದಾಗಿ ರಾತ್ರಿ ವೇಳೆ ಜನರು ಓಡಾಡಲು ಹರಸಾಹಸ ಪಡುವಂತಾಗಿದೆ.
ಈ ಸಂಬಂಧ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಯವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಕ್ಷೇತ್ರದ ಶಾಸಕರು ಈ ಗ್ರಾಮದ ಬಗ್ಗೆ ವಿಶೇಷ ಕಾಳಜಿ ತೋರಿ ಗ್ರಾಮವನ್ನು ಅಭಿವೃದ್ಧಿ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…