ಮೈಸೂರಿನ ಮೆಟ್ರೋಪೋಲ್ ವೃತ್ತದಲ್ಲಿ ಮಹಾರಾಣಿ ಕಾಲೇಜಿನ ಬಳಿ ಸಾರ್ವಜನಿಕ ಶೌಚಾಲಯವನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದರೂ ಶೌಚಾಲಯ ಸಾರ್ವಜನಿಕರ ಬಳಕೆಗೆ ಲಭ್ಯವಾಗದೆ ತೊಂದರೆಯಾಗಿದೆ. ಮೈಸೂರು ರೈಲು ನಿಲ್ದಾಣವು ಮೆಟ್ರೋಪೋಲ್ ವೃತ್ತದ ಸಮೀಪವೇ ಇರುವುದರಿಂದ ಹಾಗೂ ಮಡಿಕೇರಿ, ಹುಣಸೂರು, ಕೆ.ಆರ್.ನಗರ, ಹಾಸನ, ಚಿಕ್ಕಮಗಳೂರು, ಮಂಗಳೂರು ಹಾಗೂ ಇನ್ನಿತರ ಸ್ಥಳಗಳಿಗೆ ಪ್ರಯಾಣಿಸುವವರು ಈ ವೃತ್ತದಲ್ಲಿರುವ ಬಸ್ ನಿಲ್ದಾಣವನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಪ್ರತಿನಿತ್ಯ ಈ ಸ್ಥಳದಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಹೆಚ್ಚು ಗ್ರಾಮೀಣ ಭಾಗದ ಜನರು ಓಡಾಡುತ್ತಾರೆ.
ಆದರೆ ಸಾರ್ವಜನಿಕ ಶೌಚಾಲಯ ಬಳಕೆಗೆ ಲಭ್ಯವಿಲ್ಲದೇ ಇರುವುದರಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಸಾರ್ವಜನಿಕ ಶೌಚಾಲಯದ ಬೀಗ ತೆರೆದು ಜನರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
–ನಾಗೇಶ್ , ಮಾನಸಗಂಗೋತ್ರಿ, ಮೈಸೂರು





