Mysore
29
clear sky

Social Media

ಗುರುವಾರ, 16 ಏಪ್ರಿಲ 2026
Light
Dark

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ

ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಮಹಾಲಕ್ಷ್ಮಿ ವಿಜ್ಞಾನ ವಿಭಾಗದಲ್ಲಿ, ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಶಿಲ್ಪಾ ಅವರು ಕಲಾ ವಿಭಾಗದಲ್ಲಿ, ವಾಣಿಜ್ಯ ವಿಭಾಗದಲ್ಲಿ ವರ್ಷಿತ ಮತ್ತು ಸೂರ್ತಿ ಅವರು ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಬಾರ್ ಮಹೇಶ್ ಮತ್ತು ಲತಾ ದಂಪತಿಯ ಪುತ್ರಿ ಮಹಾಲಕ್ಷ್ಮಿವಿಜ್ಞಾನ ವಿಭಾಗದಲ್ಲಿ ೬೦೦ಕ್ಕೆ ೫೮೨ ಅಂಕ ಪಡೆದಿದ್ದಾರೆ.

ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ನಾಗನಾಯಕ-ಮಂಜುಳ ಅವರ ಪುತ್ರಿ ಶಿಲ್ಪಾ ಅವರು ಕಲಾ ವಿಭಾಗದಲ್ಲಿ ೫೮೬ ಅಂಕ ಪಡೆದು ಕೊಂಡಿದ್ದು, ಹೊಸಹೊಳಲು ಗ್ರಾಮದ ನಿವಾಸಿ ಗಳಾದ ಸತೀಶ್ ಮತ್ತು ಜ್ಯೋತಿ ಅವರ ಪುತ್ರಿ ವರ್ಷಿತ ವಾಣಿಜ್ಯ ವಿಭಾಗದಲ್ಲಿ ೫೯೨ ಅಂಕ, ಹೊಸ ಹೊಳಲು ಗ್ರಾಮದ ನಿವಾಸಿಗಳಾದ ಸತೀಶ್ ಮತ್ತು ರೇಖಾ ದಂಪತಿ ಮಗಳಾದ ಸೂರ್ತಿ ೫೯೨ ಅಂಕ ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಎಂಎಂಕೆ ಶಿಕ್ಷಣ ಸಂಸ್ಥೆಗೆ ಶೇ. ೧೦೦ ಫಲಿತಾಂಶ:
ಇದೇ ಕಾಲೇಜಿನ ವಿದ್ಯಾರ್ಥಿಗಳಾದ ಶಿಕ್ಷಣ ಇಲಾಖೆಯ ಹೆಬ್ಬಾಳದ ರವಿ ಮತ್ತು ಗಾಯತ್ರಿ ಅವರ ಪುತ್ರಿ ನಿತ್ಯಶ್ರೀ ೫೮೦ ಅಂಕ, ಕಾರಾಪುರ ಗ್ರಾಮದ ರೈತ ಕಾಳಸ್ವಾಮಿ ಮತ್ತು ಸಂಧ್ಯಾ ಅವರ ಪುತ್ರಿ ಭುಹಾನ ೫೮೦ ಅಂಕ ಪಡೆದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಎಲ್ಲ ೭೬ ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಎಲ್ಲ ೬೭ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ.

ಅತ್ಯುನ್ನತ ಶ್ರೇಣಿಯಲ್ಲಿ ೫೬ ಮಂದಿ, ಪ್ರಥಮ ದರ್ಜೆಯಲ್ಲಿ ೮೫ ವಿದ್ಯಾರ್ಥಿಗಳು ಉತ್ತೀರ್ಣರಾಗಿ ದ್ದಾರೆ. ಸತತ ಐದು ವರ್ಷಗಳಿಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆಯುತ್ತಿರುವುದು ಸಂತಸ ತಂದಿದೆ ಎಂದು ಎಂಎಂಕೆ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಎಸ್. ಪಿ. ಪ್ರಕಾಶ್ ತಿಳಿಸಿದ್ದಾರೆ.

ಪಟ್ಟಣದ ಆದಿ ಚುಂಚನಗಿರಿ ಪದವಿ ಪೂರ್ವ ಕಾಲೇಜು ವಿಜ್ಞಾನ ವಿಭಾಗದಲ್ಲಿ ೮೨ ವಿದ್ಯಾರ್ಥಿಗಳು ಪರೀಕ್ಷೆ ತೆಗೆದು ಕೊಂಡಿದ್ದು, ಇವರ ಪೈಕಿ ೮೦ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. ೯೮ ಫಲಿತಾಂಶ ಬಂದಿದೆ ಎಂದು ಪ್ರಾಂಶುಪಾಲ ಭೈರೇಗೌಡ ತಿಳಿಸಿದ್ದಾರೆ.

೨೬ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೫೧ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ೩ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಯಾಗಿದ್ದಾರೆ. ಕೆ. ಪಿ. ಸಾನ್ವಿ ೫೭೮ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ೧೪೯ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು ೧೪೪ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ೫೦ ವಿದ್ಯಾರ್ಥಿ ಗಳು ಅತ್ಯುನ್ನತ ಶ್ರೇಣಿಯಲ್ಲಿ, ೮೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ೧೨ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಮತ್ತು ೨ ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಎಚ್. ಎಸ್. ವರ್ಷಿತ ಹಾಗೂ ಸೂರ್ತಿ ಅವರು ೫೯೨ ಅಂಕಗಳನ್ನು ಪಡೆದು ತಾಲ್ಲೂಕಿಗೆ ಜಂಟಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ೧೦೮ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು ೧೦೬ ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದು, ಶೇ. ೯೮ ಫಲಿತಾಂಶ ಬಂದಿದೆ. ೩೩ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೫೪ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ೧೭ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಇಬ್ಬರು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಾಲೇಜಿಗೆ ಉತ್ತಮ ಫಲಿತಾಂಶವನ್ನು ತಂದುಕೊಟ್ಟ ವಿದ್ಯಾರ್ಥಿಗಳನ್ನು ಸೋಮೇಶ್ವರನಾಥ ಸ್ವಾಮೀಜಿ, ಆಡಳಿತಾಽಕಾರಿ ಪ್ರೊ. ಕೆ. ಪಿ. ಬಸವಗೌಡ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

 

Tags:
error: Content is protected !!