Andolana originals

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು

ಗಿರೀಶ್‌ ಹುಣಸೂರು

ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ೨೦೨೬-೨೭ನೇ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿಗೆ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ(ಶೇ. ೯೪. ೪೯)ದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿರುವುದರಿಂದ ಈ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಳವಾಗುವ ನಿರೀಕ್ಷೆ ಇದೆ.

ಪೋಷಕರು ಈಗಾಗಲೇ ತಮ್ಮ ಮಕ್ಕಳೊಂದಿಗೆ ಪದವಿ ಪೂರ್ವ ಕಾಲೇಜುಗಳತ್ತ ಆಗಮಿಸುತ್ತಿದ್ದು, ಅಲ್ಲಿ ಪ್ರವೇಶಾತಿ ಮಾಹಿತಿ, ಪ್ರಥಮ ಪಿಯುಸಿಯಲ್ಲಿ ಯಾವ ಸಂಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸಮಾಲೋಚಿಸಿ ದಾಖಲಾತಿಗೆ ಮುಂದಾಗಿದ್ದಾರೆ. ಸರ್ಕಾರಿ ಪಿಯು ಕಾಲೇಜುಗಳ ಜತೆಗೆ ಮೈಸೂರು ನಗರದಲ್ಲಿರುವ ಹತ್ತಾರು ಪ್ರತಿಷ್ಠಿತ ಖಾಸಗಿ ಪಿಯು ಕಾಲೇಜುಗಳಲ್ಲಿಯೂ ದಾಖಲಾತಿ ಬಿರುಸಿನಿಂದ ನಡೆಯುತ್ತಿದೆ.

ಡಿಸ್ಟಿಂಕ್ಷನ್, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಪ್ರಥಮ ಆಯ್ಕೆ ವಿಜ್ಞಾನ ವಿಷಯವಾದರೆ, ಉಳಿದವರು ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಕಡಿಮೆ ಅಂಕಗಳೊಂದಿಗೆ ಉತ್ತೀರ್ಣರಾದವರ ಆಯ್ಕೆ ಸಹಜವಾಗಿ ಕಲಾ ವಿಭಾಗವಾಗಿದೆ.

ಪ್ರತಿಷ್ಠಿತ ವಿದ್ಯಾಸಂಸ್ಥೆಗಳೆನಿಸಿ ಕೊಂಡಿರುವ ಖಾಸಗಿ ಕಾಲೇಜುಗಳಲ್ಲಿ ಬೋಧನಾ ಶುಲ್ಕ ಸೇರಿದಂತೆ ಮತ್ತಿತರ ಶುಲ್ಕಗಳು ಸೇರಿ ಹತ್ತಾರು ಸಾವಿರ ರೂಪಾಯಿ ಭರಿಸ ಬೇಕಿರುವುದರಿಂದ ಆರ್ಥಿಕವಾಗಿ ಅನುಕೂಲವಾಗಿರುವವರಷ್ಟೇ ಅತ್ತ ಮುಖ ಮಾಡುತ್ತಿದ್ದಾರೆ. ಬಡ-ಮಧ್ಯಮ ವರ್ಗದ ವಿದ್ಯಾರ್ಥಿಗಳು ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಈ ವರ್ಷ ೧೬,೩೪೫ ಬಾಲಕರು, ೧೭,೬೩೧ ಬಾಲಕಿಯರು ಸೇರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಒಟ್ಟು ೩೩,೯೭೬ ವಿದ್ಯಾರ್ಥಿಗಳ ಪೈಕಿ ಕೇವಲ ೧,೮೭೧ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದರಿಂದ ಜಿಲ್ಲೆಯ ಬರೋಬ್ಬರಿ ೩೨,೧೦೫ ವಿದ್ಯಾರ್ಥಿಗಳು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಬೇಕಿದೆ. ಜೊತೆಗೆ ತಮ್ಮ ಮಕ್ಕಳನ್ನು ಉತ್ತಮ ಶೈಕ್ಷಣಿಕ ವಾತಾವರಣ ಇರುವ ಮೈಸೂರು ನಗರದಲ್ಲಿ ಓದಿಸಬೇಕೆಂಬ ಇಚ್ಛಾಸಕ್ತಿ ಹೊಂದಿರುವ ನೆರೆಯ ಜಿಲ್ಲೆಗಳ ಪೋಷಕರು, ವಿದ್ಯಾರ್ಥಿಗಳು ಸಹ ಮೈಸೂರಿಗೆ ಆಗಮಿಸುವುದರಿಂದ ಸಹಜವಾಗಿಯೇ ಪ್ರಥಮ ಪಿಯುಸಿ ದಾಖಲಾತಿಗೆ ಬೇಡಿಕೆ ಹೆಚ್ಚಿದೆ. ಇನ್ನೂ ಕೆಲ ಪೋಷಕರು ತಮ್ಮ ಮಕ್ಕಳನ್ನು ವೈದ್ಯಕೀಯ, ಇಂಜಿನಿಯರಿಂಗ್ ಪದವೀಧರರನ್ನಾಗಿಸುವ ಮಹದಾಸೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಖಾಸಗಿ ಕಾಲೇಜುಗಳಿಗೆ ದಾಖಲು ಮಾಡಿಸುತ್ತಾರೆ. ಇನ್ನೂ ಕೆಲವರು ಐಟಿಐ, ಡಿಪ್ಲೊಮಾ ಕೋರ್ಸ್‌ಗಳಿಗೆ ದಾಖಲಾಗುತ್ತಾರೆ. ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರ ಪದವಿ ಪೂರ್ವಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕವೂ ಕಡಿಮೆ, ಅಲ್ಲದೆ ಸರ್ಕಾರವೇ ಉಚಿತವಾಗಿ ಪಠ್ಯಪುಸ್ತಕ ವಿತರಿಸುತ್ತಿದೆ.

ನೀವು ಯಾವ ಸಂಯೋಜನೆಯನ್ನು ಆಯ್ಕೆ ಮಾಡಿ ಕೊಂಡರೂ ಉಚಿತವಾಗಿ ಪಠ್ಯಪುಸ್ತಕ ನೀಡಲಾಗುತ್ತದೆ. ಈಗಾಗಲೇ ರಾಜ್ಯದ ಎಲ್ಲ ಸರ್ಕಾರಿ ಪಿಯು ಕಾಲೇಜುಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದ್ದು, ನುರಿತ ಉಪನ್ಯಾಸಕರು ಮಾರ್ಗದರ್ಶನಕ್ಕಾಗಿ ಎದುರು ನೋಡುತ್ತಿದ್ದಾರೆ.

ಜೊತೆಗೆ ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಪ್ರಕಟಿಸಿದಂತೆ ರಾಜ್ಯ ಸರ್ಕಾರ ೨೩ ಸರ್ಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ಆದೇಶ ಹೊರಡಿಸಿದೆ. ಈ ನೂತನ ಕಾಲೇಜುಗಳಿಗೆ ಪ್ರಥಮ ಭಾಷೆಯಾಗಿ ಕನ್ನಡ, ದ್ವಿತೀಯ ಭಾಷೆಯಾಗಿ ಇಂಗ್ಲಿಷ್ ಮತ್ತು ವಾಣಿಜ್ಯ ವಿಭಾಗದ (ಅರ್ಥಶಾಸ , ವ್ಯವಹಾರ ಅಧ್ಯಯನ, ಲೆಕ ಶಾಸ , ಗಣಕ ವಿಜ್ಞಾನ) ಸಂಯೋಜನೆಗಳನ್ನು ಮಂಜೂರು ಮಾಡಲಾಗಿದ್ದು, ಬೋಧನಾ ಪ್ರಕ್ರಿಯೆಗೆ ಅನುಕೂಲ ವಾಗುವಂತೆ ಕಡಿಮೆ ಕಾರ್ಯಭಾರವಿರುವ ಉಪನ್ಯಾಸ ಕರನ್ನು ನಿಯಮಾನುಸಾರ ಈ ಕಾಲೇಜು ಗಳಿಗೆ ನಿಯೋಜಿಸಲು ಜಿಲ್ಲಾ ಉಪ ನಿರ್ದೇಶಕರಿಗೆ ಈಗಾಗಲೇ ಸೂಚನೆ ನೀಡಿದೆ. ಅದರಂತೆ ಈಗಾಗಲೇ ಪ್ರಭಾರ ಪ್ರಾಂಶು ಪಾಲರು, ಉಪನ್ಯಾಸಕರುಗಳನ್ನು ನಿಯೋಜನೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

8 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

14 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

15 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

21 hours ago