Andolana originals

ಇಂದು ಕೊಡಗಿನಲ್ಲಿ ಪುತ್ತರಿ ಹಬ್ಬದ ಸಂಭ್ರಮ

ಧಾನ್ಯಗಳನ್ನು ಮನೆಗೆ ತುಂಬಿಸಿಕೊಳ್ಳುವ ವಿಶಿಷ್ಟ ಆಚರಣೆ : ಸಂಭ್ರಮದ ಹಬ್ಬದ ಆಚರಣೆಗೆ ಸಜ್ಜಾದ ಜನತೆ

ನವೀನ್‌ ಡಿಸೋಜ

ಮಡಿಕೇರಿ: ವರ್ಷಪೂರ್ತಿ ಬೆವರು ಸುರಿಸಿ ಬೆಳೆದ ಧಾನ್ಯಲಕ್ಷಿ ಯನ್ನು ಮನೆಗೆ ಸೇರಿಸಿಕೊಳ್ಳುವ ಸಂಭ್ರಮದ ಪುತ್ತರಿ ಹಬ್ಬಕ್ಕೆ ಕೊಡಗು ಸಜ್ಜಾಗಿದ್ದು, ಶನಿವಾರ ಹುಣ್ಣಿಮೆಯ ದಿನ ಕೊಡಗಿನಲ್ಲಿ ಪುತ್ತರಿ ಆಚರಣೆ ನಡೆಯಲಿದೆ.

ಜಿಲ್ಲೆಯಾದ್ಯಂತ ಪುತ್ತರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೊಡಗಿನಲ್ಲಿ ಆಚರಿಸುವ ಕೆಲವು ಹಬ್ಬಗಳಲ್ಲಿ ಪುತ್ತರಿ ಹಬ್ಬ ಬಹಳ ಪ್ರಮುಖವಾದದ್ದು. ಕೊಡಗಿನ ಸುಗ್ಗಿ ಹಬ್ಬ ಎಂದೇ ಹೆಸರಾಗಿರುವ ಹುತ್ತರಿ ಹಬ್ಬವನ್ನು ಈ ಭಾಗದಲ್ಲಿ ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಕೇರಳದಲ್ಲಿ ಓಣಂ ಹಬ್ಬ ಕಳೆದು ಮೂರು ತಿಂಗಳಲ್ಲಿ ಈ ಹಬ್ಬ ನಡೆಯುತ್ತದೆ. ಈ ಹಬ್ಬವನ್ನು ಜಿಲ್ಲೆಯ ಹಲವೆಡೆ ಹಗಲು ಆಚರಣೆ ಮಾಡಿದರೆ ಮತ್ತೆ ಕೆಲವೆಡೆ ರಾತ್ರಿ ಆಚರಣೆ ಮಾಡುತ್ತಾರೆ. ಇನ್ನೂ ಮನೆಗಳನ್ನು ಸುಣ್ಣ ಬಣ್ಣದಿಂದ, ತಳಿರು ತೋರಣಗಳಿಂದ ಶೃಂಗಾರಗೊಳಿಸಲಾಗುತ್ತದೆ.

ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮನೆ ಮಂದಿಯೆಲ್ಲಾ ಸಂಭ್ರಮದಿಂದ ಪಾಲ್ಗೊಂಡು ಆಚರಿಸುವ ಹುತ್ತರಿ ಹಬ್ಬ ಕೊಡಗಿನ ವಿಶೇಷ. ಕೊಡವ ನುಡಿಯ ಪುತ್ತರಿ (ಪುದಿಯ ಅರಿ) ಅಂದರೆ ಹೊಸ ಅಕ್ಕಿ. ವ್ಯವಸಾಯವನ್ನೇ ಮಾಡಿ ಬದುಕುವ ಬಹುತೇಕ ರೈತಾಪಿ ವರ್ಗ ಭತ್ತದ ಪೈರುಗಳು ಬೆಳೆದಾಗ ಶಾಸ್ತ್ರೋಕ್ತವಾಗಿ ಕದಿರು ಕುಯ್ದು ತಂದು ಮನೆ ತುಂಬಿಸಿಕೊಳ್ಳುವುದೇ ಈ ಪುತ್ತರಿ ಹಬ್ಬದ ವೈಶಿಷ್ಟ್ಯವಾಗಿದೆ.

ಮೊದಲು ಕುಟುಂಬದ ಹಿರಿಯ ಮನೆಮಂದಿಯೊಂದಿಗೆ ನೆರೆ ಕಟ್ಟುವ ಕಾರ್ಯದಲ್ಲಿ ತೊಡಗುತ್ತಾರೆ. ಆ ಬಳಿಕ ನಿಗದಿಪಡಿಸಿದ ಸಮಯಕ್ಕೆ ಗದ್ದೆಗೆ ತೆರಳಿ ಭತ್ತದ ಕದಿರುಗಳನ್ನು ಪೂಜಿಸಿ ಆ ಬಳಿಕ ಪೊಲಿ ಪೊಲಿಯೇ ದೇವಾ ಎಂದು ಕೂಗುತ್ತಾ ಶಾಸ್ತ್ರೋಕ್ತವಾಗಿ ಭತ್ತದ ಕದಿರನ್ನು ಕತ್ತರಿಸಿ ತಂದು ದೇವಾಲಯ ವನ್ನು, ಮನೆಯನ್ನು ತುಂಬಿಕೊಳ್ಳುತ್ತಾರೆ. ಮತ್ತೊಂದೆಡೆ ಮಕ್ಕಳು, ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ.

ಪುತ್ತರಿಯಂದು ರಾತ್ರಿ ಸಮಯದ ಪರಿವೆಯೇ ಇಲ್ಲದೆ ವಿಶೇಷ ಊಟೋಪಚಾರಗಳು ನಡೆಯುತ್ತವೆ. ಪುತ್ತರಿಯಂದು ಅಡುಗೆ ವೈವಿಧ್ಯಮಯವಾಗಿದ್ದು, ಬಾಳೆಹಣ್ಣಿನಿಂದ ತಯಾರಿಸಿದ ತಂಬಿಟ್ಟು ಖಾದ್ಯ ಸವಿಯಲಾಗುತ್ತದೆ.

ಜಿಲ್ಲೆಯ ಹಲವು ಭಾಗಗಳಲ್ಲಿ ಇಂತಹ ಹುತ್ತರಿ ಕೋಲಾಟ ಇಂದಿಗೂ ನಡೆಯುತ್ತದೆ. ಆದರೆ, ಕ್ರೀಡೆ, ಕುಣಿತಗಳು ವರ್ಷದಿಂದ ವರ್ಷಕ್ಕೆ ಗ್ರಾಮಾಂತರ ಪ್ರದೇಶಗಳಿಂದ ಕ್ಷೀಣಿಸಲಾರಂಭಿಸಿದೆ.

ಪುತ್ತರಿ ಆಚರಣೆಗೆ ದಿನ ನಿಗದಿ
ಪುತ್ತರಿಯನ್ನು ಶನಿವಾರ ಆಚರಿಸಲು ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ಇತ್ತೀಚೆಗೆ ದಿನ ನಿಗದಿಪಡಿಸಲಾಗಿತ್ತು. ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದ ಆವರಣದಲ್ಲಿ ನಾಡಿನ ೧೩ ತಕ್ಕಮುಖ್ಯಸ್ಥರು, ದೇಗುಲದ ತಕ್ಕಮುಖ್ಯಸ್ಥರು, ಭಕ್ತಜನ ಸಂಘದ ಪದಾಽಕಾರಿಗಳ ಉಪಸ್ಥಿತಿಯಲ್ಲಿ ಸಂಪ್ರದಾಯದಂತೆ ಅಮ್ಮಂಗೇರಿ ಜ್ಯೋತಿಷರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪುತ್ತರಿ ದಿನ ಮತ್ತು ಆಚರಣೆಗೆ ಸಮಯ ನಿಗದಿಪಡಿಸಿದ್ದಾರೆ. ಶನಿವಾರ ರಾತ್ರಿ ೭. ೩೦ಕ್ಕೆ ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ನೆರೆ ಕಟ್ಟುವುದು, ೮. ೩೦ಕ್ಕೆ ಕದಿರು ಕೊಯ್ಯುವುದು ಮತ್ತು ೯. ೩೦ ಗಂಟೆಗೆ ಪ್ರಸಾದ ಸ್ವೀಕಾರ ಮಾಡಲು ನಿರ್ಧರಿಸಲಾಗಿದೆ.

ಸಾರ್ವಜನಿಕ ಆಚರಣೆ ಸಮಯ
ಸಂಪ್ರದಾಯದಂತೆ ಪಾಡಿ ಶ್ರೀ ಇಗ್ಗುತ್ತಪ್ಪದಲ್ಲಿ ಪ್ರಥಮವಾಗಿ ಪುತ್ತರಿ ಆಚರಣೆ ನಡೆದು ಬಳಿಕ ನಾಡಿನೆಲ್ಲೆಡೆ ಆಚರಿಸಲಾಗು ತ್ತದೆ. ಅದರಂತೆ ಪುತ್ತರಿಯಂದು ರಾತ್ರಿ ೭. ೫೦ಕ್ಕೆ ನೆರೆ ಕಟ್ಟುವುದು, ೮. ೫೦ಕ್ಕೆ ಕದಿರು ಕೊಯ್ಯುವುದು ಮತ್ತು ೯. ೫೦ಕ್ಕೆ ಪ್ರಸಾದ ಸ್ವೀಕರಿಸುವ ಮೂಲಕ ನಾಡಿನಾದ್ಯಂತ ಸಂಭ್ರಮದ ಹುತ್ತರಿ ಆಚರಣೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ ಸೃಷ್ಟಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…

13 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣ: ವ್ಯಕ್ತಿಯ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…

24 mins ago

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

3 hours ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

3 hours ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

3 hours ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

3 hours ago