Andolana originals

ಕೊಡಗಿನಲ್ಲಿ ಇಂದು ಪುತ್ತರಿ ಹಬ್ಬದ ಸಂಭ್ರಮ

ಧಾನ್ಯಲಕ್ಷ್ಮಿಯನ್ನು ಮನೆಗೆ ಸೇರಿಸಿಕೊಳ್ಳುವ ಆಚರಣೆಗೆ ಜಿಲ್ಲೆಯಾದ್ಯಂತ ಅಗತ್ಯ ಸಿದ್ಧತೆ

ನವೀನ್ ಡಿಸೋಜ

ಮಡಿಕೇರಿ : ಇಂದು ಕೊಡಗಿನಲ್ಲಿ ಪುತ್ತರಿ ಹಬ್ಬದ ಸಂಭ್ರಮ. ಸಾಂಪ್ರದಾಯಿಕವಾಗಿ ಆಚರಿಸಲಾಗುವ ಮಹತ್ವದ ಪುತ್ತರಿ ಆಚರಣೆಗೆ ಕೊಡಗು ಸಜ್ಜಾಗಿದೆ.

ಕೊಡಗು ವಿಶಿಷ್ಟ ಸಂಸ್ಕೃತಿ, ಆಚಾರ-ವಿಚಾರಗಳಿಗೆ ಹೆಸರಾದ ಜಿಲ್ಲೆ. ಪ್ರಕೃತಿಯೊಂದಿಗೆ ಬೆಸೆದುಕೊಂಡ ಇಲ್ಲಿನ ಜನರ ಒಂದೊಂದು ಹಬ್ಬ-ಹರಿದಿನಗಳು ಗಮನ ಸೆಳೆಯುತ್ತವೆ. ಅದರಂತೆ ಗುರುವಾರ ಕೊಡಗಿನಾದ್ಯಂತ ಪುತ್ತರಿ ಹಬ್ಬದ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮನೆ ಮಂದಿಯೆಲ್ಲಾ ಸಂಭ್ರಮ ದಿಂದ ಪಾಲ್ಗೊಂಡು ಆಚರಿಸುವ ಹುತ್ತರಿ ಹಬ್ಬ ಕೊಡಗಿನ ವಿಶೇಷ. ಕೊಡವ ನುಡಿಯ ಪುತ್ತರಿ (ಪುದಿಯ ಅರಿ) ಅಂದರೆ ಹೊಸ ಅಕ್ಕಿ. ವ್ಯವಸಾಯವನ್ನೇ ನಂಬಿ ಬದುಕುವ ಬಹುತೇಕ ರೈತಾಪಿ ವರ್ಗ ಭತ್ತದ ಬೆಳೆ ಬೆಳೆದಾಗ ಶಾಸ್ತ್ರೋಕ್ತವಾಗಿ ಕುಯ್ದು ತಂದು ಮನೆ ತುಂಬಿಸಿಕೊಳ್ಳುವುದೇ ಈ ಪುತ್ತರಿ ಅಥವಾ ಹುತ್ತರಿ ಹಬ್ಬದ ವೈಶಿಷ್ಟ್ಯ.

ಪುತ್ತರಿ ಹಬ್ಬದ ಈ ಸಂದರ್ಭದಲ್ಲಿ ಮನೆ ಮಂದಿಯೆಲ್ಲಾ ಒಟ್ಟುಗೂಡಿ ಭತ್ತದ ಗದ್ದೆಗೆ ತೆರಳುತ್ತಾರೆ. ಪ್ರಥಮ ಕೊಯ್ಲಿಗೆಂದು ನಿರ್ದಿಷ್ಟಪಡಿಸಿದ ಗದ್ದೆಯಲ್ಲಿ ಕುಟುಂಬದ ಹಿರಿಯ ಭತ್ತದ ಬೆಳೆಗೆ ಪೂಜಿಸಿ ಅದಕ್ಕೆ ಹಣ್ಣು, ಕಾಯಿ, ಹಾಲು, ಜೇನುಗಳನ್ನು ಸಮರ್ಪಿಸಿ ಬಳಿಕ ಪೊಲಿ ಪೊಲಿಯೇ ದೇವಾ ಎಂದು ಏರುದನಿಯಲ್ಲಿ ಕೂಗುತ್ತಾ ಭತ್ತದ ತೆನೆಗಳನ್ನು ಕತ್ತರಿಸಿ ತಂದು ಮನೆಯನ್ನು ತುಂಬಿಕೊಳ್ಳುತ್ತಾರೆ.

ಈ ವೇಳೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ. ಪುತ್ತರಿ ಆಚರಣೆಗೆಂದೇ ತಾತ್ಕಲಿಕ ಪಟಾಕಿ ಅಂಗಡಿಗಳು ತೆರೆಯಲ್ಪಟ್ಟಿವೆ. ಪುತ್ತರಿಯಂದು ಅಡುಗೆ ಕೂಡ ವೈವಿಧ್ಯಮಯವಾಗಿರುತ್ತದೆ. ಬಾಳೆಹಣ್ಣಿನಿಂದ ತಯಾರಿಸಿದ ತಂಬಿಟ್ಟು, ಘಮಘಮಿಸುವ ಏಲಕ್ಕಿ ಪುಟ್, ಆಗತಾನೆ ಗದ್ದೆಯಿಂದ ಕುಯ್ದು ತಂದ ಭತ್ತದ ಅಕ್ಕಿಗೆ ಐದಾರು ಪುಟ್ಟ ಕಲ್ಲು ಚೂರು ಸೇರಿಸಿ ಪಾಯಸ ಈ ದಿನದ ವಿಶೇಷ. ಇದರೊಂದಿಗೆ ಕುಟುಂಬ ಸ್ಥರು ಒಟ್ಟಾಗಿ ಸೇರಿ ಭೋಜನ ಸವಿದು ಸಂಭ್ರಮಿಸುತ್ತಾರೆ.

ಇಗ್ಗುತ್ತಪ ದೇವಾಲಯದಲ್ಲಿ ದಿನ ನಿಗದಿ. . .
ಹಬ್ಬದ ದಿನಾಂಕವನ್ನು ಕೊಡಗಿನ ಪ್ರಮುಖ ದೇವಾಲಯವಾದ ಕಕ್ಕಬ್ಬೆಯ ಇಗ್ಗುತಪ್ಪ ದೇವಾಲಯದಲ್ಲಿ ನಿಶ್ಚಯಿಸುತ್ತಾರೆ. ಈ ಬಾರಿ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ದಿನ ನಿಗದಿ ಮಾಡಿದ್ದು, ಧಾನ್ಯಲಕ್ಷ್ಮಿಯನ್ನು ಸಂಭ್ರಮದಿಂದ ಬರಮಾಡಿಕೊಳ್ಳುವ ಕೊಡಗಿನ ಪುತ್ತರಿ ಹಬ್ಬವನ್ನು ಡಿ. ೪ರಂದು ಗುರುವಾರ ಆಚರಿಸುವಂತೆ ನಿರ್ಧರಿಸಲಾಗಿದೆ. ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಽಯಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು ವ್ಯವಸ್ಥಾಪನಾ ಸಮಿತಿ ಪ್ರಮುಖರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಜ್ಯೋತಿಷಿ ಶಶಿಕುಮಾರ್ ದಿನ ನಿಗದಿ ಮಾಡಿದ್ದಾರೆ. ರಾತ್ರಿ ೮. ೧೦ಕ್ಕೆ ನೆರೆ ಕಟ್ಟುವುದು, ೯. ೧೦ಕ್ಕೆ ಕದಿರು ತೆಗೆಯುವುದು. ಇದಕ್ಕೂ ಮುನ್ನ ಗುರುವಾರ ಹಗಲು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕಲ್ಲಾಡ್ಚ ಹಬ್ಬ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

52 mins ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

2 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

2 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

2 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

2 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

3 hours ago