ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದಕ್ಕೆ ಅಫಿಡವಿಟ್‌ನೊಂದಿಗೆ ದಾಖಲೆ ಸಲ್ಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ ನೀಡಿರುವುದು ಸ್ವಾಗತಾರ್ಹ.
ಜವಾಬ್ದಾರಿ ಸ್ಥಾನದಲ್ಲಿರುವ ನಾಯಕರು ಒಂದು ವಿಷಯದ ಬಗ್ಗೆ ಆರೋಪ ಮಾಡಿದರೆ ಅದಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ ಪೂರಕ ದಾಖಲೆಗಳನ್ನು ಒದಗಿಸಿ ಸಹಕರಿಸುವುದು ಉತ್ತಮ ನಡೆ. ಭಾರತದ ಚುನಾವಣಾ ಆಯೋಗ ಕಾಲಕ್ಕೆ ತಕ್ಕಂತೆ ಮತದಾನದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮಾದರಿಯಾಗಿದೆ. ಆದರೆ ರಾಹುಲ್ ಗಾಂಧಿ ಅವರ ಆರೋಪದಿಂದ ಚುನಾವಣಾ ಆಯೋಗದ ಬಗ್ಗೆ ಅನುಮಾನ ಪಡುವಂತಹ ಪರಿಸ್ಥಿತಿ ಉಂಟಾಗಿದೆ. ರಾಹುಲ್ ಗಾಂಧಿ ಅವರು ಆರೋಪವನ್ನು ಸಾಬೀತು ಪಡಿಸಲು ದಾಖಲೆ ಸಲ್ಲಿಸಬೇಕು. ಇಲ್ಲದಿದ್ದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸಾಬೀತಾಗಿ ರಾಹುಲ್ ಗಾಂಽ ಅವರಿಗೆ ಹಿನ್ನಡೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





