Andolana originals

ಮಳೆ ಕೊರತೆ: ಭತ್ತದ ಬೆಳೆ ಉಳಿಸಿಕೊಳ್ಳಲು ಹರಸಾಹಸ

ಕಾಂಗೀರ ಬೋಪಣ್ಣ

ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಆತಂಕ 

ವಿರಾಜಪೇಟೆ: ತಾಲ್ಲೂಕಿನಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಭತ್ತದ ಬೆಳೆಗೆ ಆತಂಕ ಎದುರಾಗಿದೆ. ಆಗಸ್ಟ್‌ನಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ತೋಡು ಹಾಗೂ ಕೆರೆಗಳಿಂದ ನೀರು ಹಾಯಿಸುತ್ತಿದ್ದಾರೆ.

ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಆತಂಕ ಗ್ರಾಮೀಣ ಭಾಗದ ಜನರನ್ನು ಕಾಡುತ್ತಿದೆ.

ಕಾಡು ಪ್ರಾಣಿಗಳ ಹಾವಳಿ, ಕಾರ್ಮಿಕರ ಕೊರತೆ ಇನ್ನಿತರೆ ಸಮಸ್ಯೆಗಳಿಂದ ಭತ್ತದ ಕೃಷಿಯಿಂದ ರೈತರು ಹಿಂದೆ ಸರಿಯುತ್ತಿದ್ದಾರೆ. ಈ ನಡುವೆ ಕೃಷಿ ಮುಂದುವರಿಸಿರುವವರು ಮಳೆಯ ಅಭಾವದ ನಡುವೆಯೂ ನಾಟಿ ಕಾರ್ಯ ಪೂರ್ಣಗೊಳಿಸಿ ಬೆಳೆ ರಕ್ಷಿಸಲು ಶ್ರಮಿಸುತ್ತಿದ್ದಾರೆ. ಸದ್ಯ ಬೆಳೆ ಉತ್ತಮವಾಗಿರುವಂತೆ ಕಂಡರೂ ನೀರಿನ ಕೊರತೆಯಿಂದ ಮುಂದಿನ ದಿನಗಳಲ್ಲಿ ಫಸಲು ಕೈತಪ್ಪುವ ಆತಂಕವಿದೆ.

ವಿರಾಜಪೇಟೆ ತಾಲ್ಲೂಕಿನಲ್ಲಿ ಸುಮಾರು ೬೫೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿರುವುದಾಗಿ ಕೃಷಿ ಇಲಾಖೆ ಅಂದಾಜಿಸಿದೆ. ರೈತರಿಗೆ ೫೫.೨೫ ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

೨೦೨೫-೨೬ನೇ ಸಾಲಿನಲ್ಲಿ ಮಳೆಯಾಶ್ರಿತ ಭತ್ತದ ಕೃಷಿಗೆ ೨,೭೧೦ ಎಕರೆ ಗುರಿ ಹೊಂದಲಾಗಿದ್ದು, ೨,೫೫೬ ಹೆಕ್ಟೇರ್‌ನಲ್ಲಿ ಕೃಷಿ ಸಾಧನೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ತಾಲ್ಲೂಕಿನಲ್ಲಿ ಕೇವಲ ೫೮ ಮಂದಿ ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದಾರೆ.

ಮಳೆಯ ಅಂಕಿ-ಅಂಶಗಳ ಪ್ರಕಾರ, ಕಳೆದ ಸಾಲಿನಲ್ಲಿ ಸೆಪ್ಟೆಂಬರ್‌ವರೆಗೆ ೨,೧೫೮.೩ ಮಿ.ಮೀ. ಮಳೆಯಾಗಿದ್ದರೆ, ಈ ಬಾರಿ ಕೇವಲ ೧,೧೪೭.೧ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಳೆಯ ಪ್ರಮಾಣ ಅರ್ಧದಷ್ಟು ಕಡಿಮೆಯಾಗಿದೆ.

ಸದ್ಯ ಕುಡಿಯುವ ನೀರಿಗೆ ಹೆಚ್ಚಿನ ತೊಂದರೆ ಇಲ್ಲದಿದ್ದರೂ, ಮುಂದಿನ ಬೇಸಿಗೆಯಲ್ಲಿ ಬಾವಿಗಳಲ್ಲಿ ನೀರಿನ ಮಟ್ಟ ಕುಸಿಯುವ ಆತಂಕವಿದೆ. ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಕೊಳವೆಬಾವಿ ಅಥವಾ ಕೆರೆ ಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಜಾನುವಾರುಗಳ ಸಂಖ್ಯೆ ಕಡಿಮೆಯಿದ್ದರೂ, ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಉಂಟಾಗಬಹುದೆಂಬ ಕಾರಣಕ್ಕೆ ಭತ್ತದ ಹುಲ್ಲನ್ನು ಮಾರಾಟ ಮಾಡದೆ ಸಂಗ್ರಹಿಸಿಡಲು ರೈತರು ಚಿಂತನೆ ನಡೆಸುತ್ತಿದ್ದಾರೆ.

” ಈ ಬಾರಿ ಸುಮಾರು ೩೦ ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ ಮಾಡಿದ್ದೇನೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ನೀರಿನ ಸಮಸ್ಯೆ ಎದುರಾಗಿದೆ. ತೋಡು ಹಾಗೂ ಇತರ ಮೂಲಗಳಿಂದ ನೀರು ಹಾಯಿಸಿ ಬೆಳೆ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿನ ಬೆಳೆಗೆ ನೀರಿನ ಕೊರತೆ ಕಾಡುತ್ತಿದ್ದು, ಮಳೆ ಬಾರದಿದ್ದರೆ ಫಸಲು ಬರುವವರೆಗೆ ಬೆಳೆ ಉಳಿಸಿಕೊಳ್ಳುವುದು ಕಷ್ಟವಾಗಬಹುದು.”

-ಸುಶಾಂತ್, ಅರಮೇರಿ ಗ್ರಾಮ

” ವಿರಾಜಪೇಟೆ ತಾಲ್ಲೂಕನ್ನು ಮೊದಲ ಹಂತದಲ್ಲಿ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಬರದ ಪರಿಣಾಮದ ಪ್ರಮಾಣವನ್ನು ನಿಖರವಾಗಿ ಗುರುತಿಸಿ ವರದಿ ಸಲ್ಲಿಸಲಾಗುವುದು. ಈವರೆಗೆ ಬರ ಪರಿಹಾರ ಮಂಜೂರಾಗಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯ ಕುಡಿಯುವ ನೀರಿನ ಅಭಾವ ಇಲ್ಲದಿದ್ದರೂ, ಮುಂದಿನ ತಿಂಗಳಿಂದ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ.”

-ಪ್ರವೀಣ್‌ಕುಮಾರ್, ತಹಸಿಲ್ದಾರ್, ವಿರಾಜಪೇಟೆ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

19 mins ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 mins ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

25 mins ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

27 mins ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

30 mins ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

35 mins ago