Andolana originals

ರಣಬಿಸಿಲು: ಕಲ್ಲಂಗಡಿ, ಎಳನೀರಿಗೆ ಮೊರೆ ಹೋದ ಜನತೆ

ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಬೇಸಿಗೆ ಆರಂಭವಾಗುತ್ತಿದ್ದಂತೆ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನತೆ ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳು, ಎಳನೀರು, ಕಬ್ಬಿನ ಹಾಲುಗಳತ್ತ ಮುಖ ಮಾಡುತ್ತಿದ್ದಾರೆ.

ತಾಲ್ಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಳವಾಗಿದ್ದು ಜನರು ಬಸವಳಿಯುತ್ತಿದ್ದಾರೆ. ಹೀಗಾಗಿ ಜನರು ತಂಪು ಪಾನೀಯ ಹಾಗೂ ಎಳನೀರಿನ ಮೊರೆ ಹೋಗುತ್ತಿದ್ದಾರೆ. ಇದರಿಂದ ತಂಪು ಪಾನೀಯಗಳಿಗೆ ಹಾಗೂ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ.

ತಾಲ್ಲೂಕು ರಾಜ್ಯದಲ್ಲೇ ಅತ್ಯಽಕ ಕಾಡುಪ್ರದೇಶ ಹೊಂದಿದ್ದರೂ ಬೇಸಿಗೆಯ ಬಿಸಿಲಿನ ತಾಪಕ್ಕೆ ಜನರು ನಿತ್ರಾಣರಾಗುವಂತಾಗಿದೆ.

ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲಿನ ಪರಿಣಾಮ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೆಲಸದ ನಿಮಿತ್ತ ಹೊರಬರುವ ಜನರು ಛತ್ರಿಯ ಮೊರೆ ಹೋಗಿದ್ದಾರೆ. ಬೆಳಿಗ್ಗೆ ೯ರ ವೇಳೆಗೆ ಆರಂಭವಾಗುವ ಎಳೆ ಬಿಸಿಲು ಜನರ ಮೈಸುಡಲು ಪ್ರಾರಂಭಿಸುತ್ತದೆ. ಸಂಜೆ ೫, ೬ ಗಂಟೆಯವರೆಗೂ ಬಿಸಿಲಿನ ಝಳ ಇರುವುದರಿಂದ ನಾಗರಿಕರು ದಣಿವಾರಿಸಿಕೊಳ್ಳಲು ಎಳನೀರು, ತಂಪುಪಾನೀಯ ಹಾಗೂ ಕಬ್ಬಿನ ಹಾಲಿಗೆ ಮೊರೆ ಹೋಗುತ್ತಿದ್ದಾರೆ. ಬೇಕರಿ, ಹೋಟೆಲ್‌ಗಳಲ್ಲಿ ತಂಪು ಪಾನೀಯಗಳ ಮಾರಾಟ ಹೆಚ್ಚಾಗಿದೆ. ಮಜ್ಜಿಗೆಗೆ ಸಾಕಷ್ಟು ಬೇಡಿಕೆ ಕಂಡುಬರುತ್ತಿದೆ. ಕಲ್ಲಂಗಡಿ ಹಣ್ಣು, ಸೋಡಾ, ಶರಬತ್ತು, ಹಣ್ಣಿನ ಜ್ಯೂಸ್‌ಗಳ ವ್ಯಾಪಾರ ಜೋರಾಗಿದೆ.

ಬೇಸಿಗೆ ಸಂದರ್ಭದಲ್ಲಿ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ತಾಲ್ಲೂಕು ಮತ್ತು ಜಿಲ್ಲೆಯ ಅಕ್ಕಪಕ್ಕದ ತೋಟಗಳಿಂದ ಎಳನೀರು ಖರೀದಿಸಿ ತರಲಾಗುತ್ತಿದೆ. ತೋಟಗಳಲ್ಲಿಯೂ ಎಳನೀರು ಸಿಗುತ್ತಿಲ್ಲ. -ಮಹದೇವು, ಎಳನೀರು ವ್ಯಾಪಾರಿ

ಈ ಬಾರಿ ಬಿಸಿಲಿನ ತಾಪಮಾನ ಬಹಳ ಹೆಚ್ಚಾಗಿದೆ. ಮಧ್ಯಾಹ್ನದ ವೇಳೆಯಂತೂ ಮರದ ನೆರಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ತಾಪಕ್ಕೆ ತಲೆನೋವು ಬರುವ ಸಾಧ್ಯತೆ ಹೆಚ್ಚಿದೆ. ರಾಸಾಯನಿಕ ಮಿಶ್ರಿತ ತಂಪು ಪಾನೀಯ ಕುಡಿಯುವುದರ ಬದಲು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುವ ಎಳನೀರು, ಕಬ್ಬಿನಹಾಲು, ಕಲ್ಲಂಗಡಿ, ಹಣ್ಣಿನ ರಸಗಳನ್ನು ಸೇವಿಸುವುದು ಸೂಕ್ತ. –ಆರ್. ಡಿ. ಉಲ್ಲಾಸ್, ಸಾರ್ವಜನಿಕರು

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago