ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ ದೇಶವೇ ಮೌನವಾಗುವಂತೆ ಮಾಡಿದ್ದು ರತನ್ ಟಾಟಾ ನಿಧನ. ಶಿಸ್ತು, ಸಮಯ ಪ್ರಜ್ಞೆ, ಮಾನವೀಯ ಮೌಲ್ಯಗಳ ಜತೆಗೆ ಸರಳತೆಯನ್ನೂ ಮೈಗೂಡಿಸಿಕೊಂಡು, ಯಾವುದೇ ವಿವಾದಗಳಿಗೆ ಗುರಿಯಾಗದೆ ತಮ್ಮ ಔದ್ಯೋಗಿಕ ಸಾಮ್ರಾಜ್ಯವನ್ನು ಕಟ್ಟಿದವರು ರತನ್ ಟಾಟಾ. ವಿದೇಶಗಳಿಗೂ ತಮ್ಮ ಸಂಸ್ಥೆಯನ್ನು ವಿಸ್ತರಿಸಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಜತೆಗೆ ಕಂಪೆನಿ ಗಳಿಸಿದ ಲಾಭದ ಬಹುಪಾಲನ್ನು ಸಮಾಜಕ್ಕೇ ಕೊಡುಗೆಯಾಗಿ ನೀಡಿದ್ದಾರೆ. ಇಂತಹ ಮೇರು ವ್ಯಕ್ತಿತ್ವ ಹೊಂದಿದ್ದ ರತನ್ ಟಾಟಾರ ನಿರ್ಗಮನ ದೇಶದ ಔದ್ಯೋಗಿಕ ವಲಯಕ್ಕೆ ಮಾತ್ರವಲ್ಲದೇ ದಾನ-ಧರ್ಮ ಮಾಡಬೇಕು ಎಂಬ ಪರಿಕಲ್ಪನೆಗೂ ದೊಡ್ಡ ಪೆಟ್ಟು ಬಿದ್ದಂತಾಗಿದೆ. ಇಂತಹ ವ್ಯಕ್ತಿ ಜೀವಂತವಿದ್ದಾಗ ‘ಭಾರತ ರತ್ನ’ ನೀಡಿ ಗೌರವಿಸಬೇಕಿತ್ತು. ಅದ್ಯಾವುದನ್ನೂ ಮಾಡದ ಜನಪ್ರತಿನಿಧಿಗಳು ಈಗ ಅವರ ನಿಧನಕ್ಕೆ ಕಂಬನಿ ಮಿಡಿಯುವುದು ಹಾಸ್ಯಾಸ್ಪದ. ಸರ್ಕಾರ ಅವರಿಗೆ ಮರಣೋತ್ತರವಾಗಿಯಾದರೂ ‘ಭಾರತ ರತ್ನ’ ನೀಡಿ ಗೌರವಿಸಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಬೆಂಗಳೂರು: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…