ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ ಬದಿಯ ಚರಂಡಿಗಳು ಕಟ್ಟಿಕೊಂಡಿದ್ದು, ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಈ ಚರಂಡಿಗಳನ್ನು ನಿರ್ಮಿಸಿ ಸುಮಾರು 25 ವರ್ಷಗಳೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಹೂಳು ತುಂಬಿಕೊಂಡಿವೆ. ಇದರಿಂದಾಗಿ ನೀರು ಚರಂಡಿಯಲ್ಲೇ ನಿಂತು ದುರ್ವಾಸನೆ ಬೀರಲಾರಂಭಿಸಿದೆ.
ಇನ್ನು ಮಳೆಗಾಲ ಬಂತು ಎಂದರೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೇ ರಸ್ತೆಯಲ್ಲಿಯೇ ಹರಿಯುತ್ತದೆ. ಸಾಧಾರಣ ಮಳೆಯಾದರೂ ಇಲ್ಲಿನ ರಸ್ತೆಗಳು ಕೆರೆಯಂತಾಗುತ್ತವೆ. ಇದರಿಂದಾಗಿ ಸಾರ್ವಜನಿಕರು ಈ ರಸ್ತೆಯಲ್ಲಿ ಓಡಾಡಲು ಪರದಾಡುವಂತಾಗಿದೆ. ಇನ್ನು ಈ ಭಾಗದಲ್ಲಿ ಕಸ ವಿಲೇವಾರಿ ಮಾಡಲು ಸೂಕ್ತ ಸ್ಥಳ ನಿಗದಿ ಮಾಡದ ಪರಿಣಾಮ ಅಕ್ಕಪಕ್ಕದ ಅಂಗಡಿಯವರು, ಹೋಟೆಲಿನವರು, ತರಕಾರಿ ವ್ಯಾಪಾರಿಗಳು ರಸ್ತೆ ಓದಿಯಲ್ಲಿಯೇ ಕಸವನ್ನು ತಂದು ಸುರಿಯುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಮೈಸೂರು ಮಹಾನಗರ ಪಾಲಿಕೆಯವರು ಈ ಬಗ್ಗೆ ಗಮನಹರಿಸಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆನೀರು ಸರಾಗವಾಗಿ ಹರಿದುಹೋಗು
ವಂತೆ ಮಾಡುವ ಜತೆಗೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,