ರಾಜ್ಯ ವಿಧಾನ ಸಭೆಯ ಅಧ್ಯಕ್ಷರಾದ ಯು.ಟಿ.ಖಾದರ್‌ರವರು ೧೮ ಮಂದಿ ಬಿಜೆಪಿ ಶಾಸಕರ ಅಮಾನತ್ತು ಆದೇಶವನ್ನು ರದ್ದುಪಡಿಸಿರುವುದು ಸ್ವಾಗತಾರ್ಹವಾಗಿದೆ. ಕಳೆದ ವಿಧಾನ ಸಭೆಯ ಅಽವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ್ದಾರೆಂದು ಬಿಜೆಪಿಯ ೧೮ ಮಂದಿ ಶಾಸಕರನ್ನು ೬ ತಿಂಗಳ ಕಾಲ ಅಮಾನತ್ತುಗೊಳಿಸಲಾಗಿತ್ತು. ಅಮಾನತ್ತುಗೊಂಡಿದ್ದ ಶಾಸಕರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಅಮಾನತ್ತನ್ನು ರದ್ದುಗೊಳಿಸುವಂತೆ ರಾಜ್ಯ ವಿಧಾನಸಭೆಯ ಅಧ್ಯಕ್ಷರಿಗೆ ಸೂಚಿಸಬೇಕೆಂದು ಮನವಿ ಮಾಡಿದ್ದರು. ರಾಜ್ಯಪಾಲರು ಮುಖ್ಯಮಂತ್ರಿ ಹಾಗೂ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಅಮಾನತ್ತುಗೊಂಡಿದ್ದ ೧೮ ಮಂದಿ ಶಾಸಕರ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಸೂಚಿಸಿ ದ್ದರು. ಇದೀಗ ಈ ಎಲ್ಲಾ ಶಾಸಕರ ಅಮಾನತ್ತನ್ನು ವಿಧಾನಸಭಾಧ್ಯಕ್ಷರು ರದ್ದುಗೊಳಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆಗಳು ಸರ್ವೇ ಸಾಮಾನ್ಯ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಅಂತಿಮ ಗುರಿ ಜನತಾ ಕಲ್ಯಾಣ. ಇದಕ್ಕಾಗಿ ಎಲ್ಲರೂ ಒಗ್ಗೂಡಿ ಶ್ರಮಿಸಬೇಕಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ,ಮೈಸೂರು





