Andolana originals

ಓದುಗರ ಪತ್ರ: ಸ್ಪೀಕರ್‌ ನಿರ್ಧಾರ ಸ್ವಾಗತಾರ್ಹ

ರಾಜ್ಯ ವಿಧಾನ ಸಭೆಯ ಅಧ್ಯಕ್ಷರಾದ ಯು.ಟಿ.ಖಾದರ್‌ರವರು ೧೮ ಮಂದಿ ಬಿಜೆಪಿ ಶಾಸಕರ ಅಮಾನತ್ತು ಆದೇಶವನ್ನು ರದ್ದುಪಡಿಸಿರುವುದು ಸ್ವಾಗತಾರ್ಹವಾಗಿದೆ. ಕಳೆದ ವಿಧಾನ ಸಭೆಯ ಅಽವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ್ದಾರೆಂದು ಬಿಜೆಪಿಯ ೧೮ ಮಂದಿ ಶಾಸಕರನ್ನು ೬ ತಿಂಗಳ ಕಾಲ ಅಮಾನತ್ತುಗೊಳಿಸಲಾಗಿತ್ತು. ಅಮಾನತ್ತುಗೊಂಡಿದ್ದ ಶಾಸಕರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಅಮಾನತ್ತನ್ನು ರದ್ದುಗೊಳಿಸುವಂತೆ ರಾಜ್ಯ ವಿಧಾನಸಭೆಯ ಅಧ್ಯಕ್ಷರಿಗೆ ಸೂಚಿಸಬೇಕೆಂದು ಮನವಿ ಮಾಡಿದ್ದರು. ರಾಜ್ಯಪಾಲರು ಮುಖ್ಯಮಂತ್ರಿ ಹಾಗೂ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಅಮಾನತ್ತುಗೊಂಡಿದ್ದ ೧೮ ಮಂದಿ ಶಾಸಕರ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಸೂಚಿಸಿ ದ್ದರು. ಇದೀಗ ಈ ಎಲ್ಲಾ ಶಾಸಕರ ಅಮಾನತ್ತನ್ನು ವಿಧಾನಸಭಾಧ್ಯಕ್ಷರು ರದ್ದುಗೊಳಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆಗಳು ಸರ್ವೇ ಸಾಮಾನ್ಯ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಅಂತಿಮ ಗುರಿ ಜನತಾ ಕಲ್ಯಾಣ. ಇದಕ್ಕಾಗಿ ಎಲ್ಲರೂ ಒಗ್ಗೂಡಿ ಶ್ರಮಿಸಬೇಕಾಗಿದೆ.

– ಕೆ.ವಿ.ವಾಸು, ವಿವೇಕಾನಂದ ನಗರ,ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago