ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದ ಪ್ರಕರಣ ಖಂಡನೀಯ. ವಕೀಲರು ವಿವೇಚನೆ ಕಳೆದುಕೊಂಡು ನ್ಯಾಯಾಧೀಶರತ್ತ ಶೂ ಎಸೆದರೂ ಅವರು ವಕೀಲರ ಮೇಲೆ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿರುವುದು ಅವರ ಮಾನವೀಯ ಮೌಲ್ಯಕ್ಕೆ ಸಾಕ್ಷಿಯಾಗಿದೆ. ಶೂ ಎಸೆದವರಿಗೆ ತಕ್ಕ ಶಿಕ್ಷೆಯಾಗಿ ಮುಂದಿನ ದಿನಗಳಲ್ಲಿ ಇಂತಹ ತಪ್ಪು ಮರುಕಳಿಸದಂತೆ ನಿಗಾ ವಹಿಸುವುದು ಅಗತ್ಯವಾಗಿದೆ.
-ಸೋಮು, ನಂಜನಗೂಡು





