ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ ಎಂದೂ ಗುರುತಿಸಲಾಗಿದೆ. ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಈಗ ಶಾಲೆ ಇರುವ ಜಾಗದಲ್ಲಿ ಸೇನಾಪಡೆಯ ವಾಸ್ತವ್ಯಕ್ಕೆ ಸ್ಥಳಾವಕಾಶ ಕಲ್ಪಿಸಲಾಗಿತ್ತು ಎನ್ನಲಾಗಿದೆ. ಇಂತಹ ಶಾಲೆಯ ಗೇಟಿನ ಮುಂಭಾಗದಲ್ಲಿ ಪ್ರತಿದಿನ ಬೆಳಿಗ್ಗೆ ಹೊತ್ತು ಒಂದು ಗುಡ್ಡೆ ಕಸ ಬಿದ್ದಿರುತ್ತದೆ.
ಈ ಕಸದ ಮೂಲ ಸಮೀಪದ ಅಂಗಡಿಗಳು ಅಥವಾ ಮನೆಯವರು ಇರಬಹುದು. ಆದರೆ, ಪ್ರತಿದಿನ ಬೆಳಿಗ್ಗೆ ನಗರಸಭೆಯ ಸ್ವಚ್ಛತಾ ಕಾರ್ಯ ವಾಹನ ಕಸ ಸಂಗ್ರಹಣೆಗಾಗಿ ಸಂಚರಿಸುತ್ತದೆ. ಆ ವಾಹನಕ್ಕೆ ಕಸ ನೀಡಬಹುದು. ಆದರೆ, ಶಾಲೆಯ ಮುಂದೆ ಕಸ ಹಾಕುವುದು ಸರಿಯೇ? ಪ್ರತಿದಿನ ಹೀಗೆ ಶಾಲೆಯ ಗೇಟ್‌ನ ಮುಂದೆ ಬೀಳುವ ಕಸದ ಗುಡ್ಡೆಯನ್ನು ನಗರಸಭೆ ಸ್ವಚ್ಛತಾಗಾರರು ತೆರವುಗೊಳಿಸುತ್ತಾರೆ. ಆದರೆ, ಶನಿವಾರ ಶಾಲೆಗೆ ಬೆಳಿಗ್ಗೆ ೭.೩೦ರ ಅಂದಾಜು ವೇಳೆಗೆ ಬರುವ ಮಕ್ಕಳು ಮತ್ತು ಶಿಕ್ಷಕರಿಗೆ ಕಸದ ಗುಡ್ಡೆ ಕಣ್ಣಿಗೆ ರಾಚಿದರೆ, ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಇದು ಈ ಕಸದ ವಾರಸುದಾರರಿಗೆ ಅರ್ಥವಾಗುತ್ತಿಲ್ಲವೇ?
ಸಾರ್ವಜನಿಕರು ಸಹಕರಿಸದಿದ್ದರೆ ನಗರದ ಸ್ವಚ್ಛತೆ ಮತ್ತು ಸೌಂದರ್ಯವನ್ನು ಕಾಪಾಡುವುದು ಕಷ್ಟ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತು, ಈ ಕಸದ ಸಮಸ್ಯೆಯನ್ನು ಬಗೆಹರಿಸಬೇಕು.
-ಮನೋಜ್‌ಕುಮಾರ್, ನಂಜನಗೂಡು
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…
ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…
ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…
ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…
ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…
ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…