ಮೈಸೂರಿನ ಪ್ರಮುಖ ರಸ್ತೆಗಳ ಫುಟ್‌ಪಾತ್‌ಗಳನ್ನು ಫಾಸ್ಟ್ ಫುಡ್ ನಂತಹ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಪಾದಚಾರಿಗಳು ಓಡಾಡಲು ಪರದಾಡುವಂತಾಗಿದೆ. ಶಾರದಾದೇವಿ ನಗರದಲ್ಲಿರುವ ಎಲ್‌ಐಸಿ ಕಚೇರಿಯ ಮುಂಭಾಗದ ರಸ್ತೆ ಹೆಚ್ಚಿನ ಜನಸಂದಣಿಯಿಂದ ಕೂಡಿರುವ ರಸ್ತೆಗಳಲ್ಲಿ ಒಂದಾಗಿದೆ. ಆದರೆ ಇದರ ಮುಂಭಾಗದ ಫುಟ್ ಪಾತ್ ಅನ್ನು ಸಂಪೂರ್ಣವಾಗಿ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಜನಸಾಮಾನ್ಯರು ಓಡಾಡಲು ತೊಂದರೆಯಾಗುತ್ತಿದೆ. ಇಲ್ಲಿನ ಫಾಸ್ಟ್ ಫುಡ್ ಅಂಗಡಿಯವರು ಹೋಟೆಲ್‌ನ ತ್ಯಾಜ್ಯವನ್ನು ಇಲ್ಲಿಯೇ ಬೀಸಾಡುತ್ತಿದ್ದು, ಈ ಅನೈರ್ಮಲ್ಯದ ವಾತಾವರಣದಿಂದ ಎಲ್‌ಐಸಿ ಕಚೇರಿಗೆ ಬರುವ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ನಗರಪಾಲಿಕೆಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಕ್ರಮವಹಿಸಿ ಫುಟ್ ಪಾತ್ ಮೇಲಿನ ವ್ಯಾಪಾರಿಗಳನ್ನು ತೆರವುಗೊಳಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…