ಓದುಗರ ಪತ್ರ
ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್‌ನಲ್ಲಿ ತಮಿಳು ಭಾಷೆಯಲ್ಲಿ ವಾದ ಮಂಡಿಸಲು ಅವಕಾಶ ನೀಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪುವ ಸಾಧ್ಯತೆ ತೀರಾ ಕಡಿಮೆ. ಆದರೆ, ತಮಿಳುನಾಡಿನ ಈ ಬೇಡಿಕೆ ಇತರ ರಾಜ್ಯದವರನ್ನೂ ಇಂತಹ ಬೇಡಿಕೆಗೆ ಪ್ರಚೋದಿಸುವುದನ್ನು ಅಲ್ಲಗಳೆಯಲಾಗದು. ಹಾಗೆಯೇ ತಮಿಳರೂ ಕೂಡ ತಮ್ಮ ಈ ಅಸ್ಮಿತೆಯ ಬೇಡಿಕೆಯನ್ನು ಅಷ್ಟು ಸುಲಭವಾಗಿ ಕೈಬಿಡುವ ಸಾಧ್ಯತೆ ಕಡಿಮೆ. ಮದ್ರಾಸ್‌ಅನ್ನು ಚೆನ್ನೈ ಎಂದು ಮತ್ತು ತಮಿಳುನಾಡಿನ ಬಾನುಲಿ ಕೇಂದ್ರಗಳನ್ನು ವಾನೊಲಿ ನಿಲಯಂ ಎಂದು ಬದಲಾಯಿಸಿರುವ ಅವರಿಗೆ ಹೋರಾಟ ಹೊಸದಲ್ಲ ಮತ್ತು ಅದನ್ನು ಸಾಧಿಸಿಕೊಳ್ಳುತ್ತಾರೆ. ಇದು ಇನ್ನೊಂದು ಸುತ್ತಿನ ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ತಿಕ್ಕಾಟಕ್ಕೆ ನಾಂದಿಯಾಗಬಹುದೇನೋ ಎನ್ನುವ ಸಂಶಯ ಕಾಡುತ್ತಿದೆ.
–ರಮಾನಂದ ಶರ್ಮಾ, ಬೆಂಗಳೂರು
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…