ಮಹಿಳೆಯರು ಇಂದು ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಋತು ಚಕ್ರದ ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ತೊಂದರೆಯಾಗುವುದರಿಂದ ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರಿಗೆ ವೇತನ ಸಹಿತ ಒಂದು ದಿನದ ‘ಋತುಚಕ್ರ’ ರಜೆಯನ್ನು ನೀಡುವುದಕ್ಕೆ ಅನುಮೋದನೆ ನೀಡಿರುವುದು ಸ್ವಾಗತಾರ್ಹ.
ಜೊತೆಗೆ ಈ ರಜೆಯ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವುದು ಕೂಡ ಮಹಿಳೆಯರ ಕರ್ತವ್ಯವಾಗಿದೆ. ಇದರಂತೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿನಿಯರಿಗೂ ಈ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರವು ಚಿಂತನೆ ನಡೆಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





