Mysore
13
clear sky

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಓದುಗರ ಪತ್ರ: ಆರು ತಿಂಗಳ ಅಮಾನತ್ತು ಸರಿಯಲ್ಲ

ವಿಧಾನಸಭಾ ಕಲಾಪದ ವೇಳೆ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ೧೮ ಬಿಜೆಪಿ ಶಾಸಕರನ್ನು ೬ ತಿಂಗಳ ಕಾಲ ಸದನದ ಕಲಾಪದಿಂದ ಅಮಾನತ್ತುಗೊಳಿಸಿ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಆದೇಶಿಸಿದ್ದಾರೆ.

ರಾಜ್ಯಾದ್ಯಂತ ಹನಿಟ್ರ್ಯಾಪ್ ಪ್ರಕರಣ ಬಾರೀ ಸುದ್ದಿಯಲ್ಲಿದ್ದು, ಸಿಬಿಐ ಅಥವಾ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಧರಣಿ ನಡೆಸುತ್ತಿದ್ದ ವೇಳೆ ಕೆಲವು ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿದ್ದಾರೆಂದು  ಆ ಶಾಸಕರನ್ನು ಆರು ತಿಂಗಳ ಕಾಲ ಅಮಾನತ್ತುಗೊಳಿಸುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ವಿಧಾನಸಭೆಯಲ್ಲಿ ಮಂಡಿಸಿದರು. ಈ ನಿರ್ಣಯ ಅಂಗೀಕಾರಗೊಂಡ ಬೆನ್ನಲ್ಲೇ ಸಭಾಧ್ಯಕ್ಷರ ಈ ಆದೇಶ ಹೊರಬಿದ್ದಿದೆ. ಯಾರೇ ಆದರೂ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸುವುದು ಸರಿಯಲ್ಲ. ಈ ಹಿಂದೆ ಕೂಡ ಹಲವು ಕಾರಣಗಳಿಂದ ಅನೇಕ ಶಾಸಕರು ಅಮಾನತ್ತುಗೊಂಡಿದ್ದಾರೆ. ಆದರೆ, ಆರು ತಿಂಗಳುಗಳ ಕಾಲ ಅಮಾನತ್ತುಗೊಳಿಸಿರುವುದು ಇದೇ ಮೊದಲು ಎನ್ನಬಹುದು. ಇದರೊಂದಿಗೆ ಅಮಾನತ್ತಿನ ಅವಽಯಲ್ಲಿ ಅವರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ನೀಡದಂತೆ ತಡೆ ಹಿಡಿಯಲಾಗಿದೆ ಎಂದೂ ತಿಳಿದು ಬಂದಿದೆ. ಶಾಸಕರು ವಿರೋಧ ವ್ಯಕ್ತಪಡಿಸಲು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹಲವಾರು ಮಾರ್ಗಗಳಿವೆ. ಅದನ್ನು ಬಿಟ್ಟು ಈ ರೀತಿಯಾಗಿ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸುವುದು ಸರಿಯಲ್ಲ. ಅಲ್ಲದೆ ಈ ಕಾರಣಕ್ಕಾಗಿ ಆರು ತಿಂಗಳ ದೀರ್ಘ ಕಾಲ ಅಮಾನತ್ತು ಮಾಡುವುದೂ ಸರಿಯಲ್ಲ.

-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

 

Tags:
error: Content is protected !!