Andolana originals

ಓದುಗರ ಪತ್ರ: ಆರು ತಿಂಗಳ ಅಮಾನತ್ತು ಸರಿಯಲ್ಲ

ವಿಧಾನಸಭಾ ಕಲಾಪದ ವೇಳೆ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ೧೮ ಬಿಜೆಪಿ ಶಾಸಕರನ್ನು ೬ ತಿಂಗಳ ಕಾಲ ಸದನದ ಕಲಾಪದಿಂದ ಅಮಾನತ್ತುಗೊಳಿಸಿ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಆದೇಶಿಸಿದ್ದಾರೆ.

ರಾಜ್ಯಾದ್ಯಂತ ಹನಿಟ್ರ್ಯಾಪ್ ಪ್ರಕರಣ ಬಾರೀ ಸುದ್ದಿಯಲ್ಲಿದ್ದು, ಸಿಬಿಐ ಅಥವಾ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಧರಣಿ ನಡೆಸುತ್ತಿದ್ದ ವೇಳೆ ಕೆಲವು ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿದ್ದಾರೆಂದು  ಆ ಶಾಸಕರನ್ನು ಆರು ತಿಂಗಳ ಕಾಲ ಅಮಾನತ್ತುಗೊಳಿಸುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ವಿಧಾನಸಭೆಯಲ್ಲಿ ಮಂಡಿಸಿದರು. ಈ ನಿರ್ಣಯ ಅಂಗೀಕಾರಗೊಂಡ ಬೆನ್ನಲ್ಲೇ ಸಭಾಧ್ಯಕ್ಷರ ಈ ಆದೇಶ ಹೊರಬಿದ್ದಿದೆ. ಯಾರೇ ಆದರೂ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸುವುದು ಸರಿಯಲ್ಲ. ಈ ಹಿಂದೆ ಕೂಡ ಹಲವು ಕಾರಣಗಳಿಂದ ಅನೇಕ ಶಾಸಕರು ಅಮಾನತ್ತುಗೊಂಡಿದ್ದಾರೆ. ಆದರೆ, ಆರು ತಿಂಗಳುಗಳ ಕಾಲ ಅಮಾನತ್ತುಗೊಳಿಸಿರುವುದು ಇದೇ ಮೊದಲು ಎನ್ನಬಹುದು. ಇದರೊಂದಿಗೆ ಅಮಾನತ್ತಿನ ಅವಽಯಲ್ಲಿ ಅವರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ನೀಡದಂತೆ ತಡೆ ಹಿಡಿಯಲಾಗಿದೆ ಎಂದೂ ತಿಳಿದು ಬಂದಿದೆ. ಶಾಸಕರು ವಿರೋಧ ವ್ಯಕ್ತಪಡಿಸಲು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹಲವಾರು ಮಾರ್ಗಗಳಿವೆ. ಅದನ್ನು ಬಿಟ್ಟು ಈ ರೀತಿಯಾಗಿ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸುವುದು ಸರಿಯಲ್ಲ. ಅಲ್ಲದೆ ಈ ಕಾರಣಕ್ಕಾಗಿ ಆರು ತಿಂಗಳ ದೀರ್ಘ ಕಾಲ ಅಮಾನತ್ತು ಮಾಡುವುದೂ ಸರಿಯಲ್ಲ.

-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

42 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

44 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

45 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

47 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

51 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

56 mins ago