Andolana originals

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ. ಆದರೆ, ಬೆಂಗಳೂರಿನ ವಿ.ವಿ.ಪುರಂ ಮಾದರಿಯಲ್ಲಿ ಮೈಸೂರಿನಲ್ಲಿ ಒಂದು ಸುಸಜ್ಜಿತ, ಅಧಿಕೃತ ‘ಫುಡ್ ಸ್ಟ್ರೀಟ್’ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ.

ಪ್ರಸ್ತುತ ನಗರದ ವಿವಿಧೆಡೆ ಚದುರಿಹೋಗಿರುವ ಆಹಾರದ ಗಾಡಿಗಳನ್ನು ಒಂದೇ ಸೂರಿನಡಿ ತರುವುದು ಇಂದಿನ ಅಗತ್ಯ. ಇದರಿಂದ ಪ್ರವಾಸಿಗರಿಗೆ ಸ್ಥಳೀಯ ಖಾದ್ಯಗಳನ್ನು ಸವಿಯಲು ಸುಲಭವಾಗುತ್ತದೆ. ಒಂದು ನಿಗದಿತ ಜಾಗದಲ್ಲಿ ಶುದ್ಧ ಕುಡಿಯುವ ನೀರು, ವೈಜ್ಞಾನಿಕ ಕಸ ವಿಲೇವಾರಿ ಮತ್ತು ಪಾರ್ಕಿಂಗ್ ವ್ಯವಸ್ಥೆಯೊಂದಿಗೆ ಈ ಆಹಾರದ ಬೀದಿಯನ್ನು ಅಭಿವೃದ್ಧಿಪಡಿಸಬೇಕು. ಇದು ಕೇವಲ ರುಚಿಯ ತಾಣವಾಗದೆ, ನೂರಾರು ಸಣ್ಣ ವ್ಯಾಪಾರಿಗಳಿಗೆ ಉದ್ಯೋಗ ನೀಡುವ ಆರ್ಥಿಕ ಕೇಂದ್ರ ಆಗಬಲ್ಲದು. ಮೈಸೂರಿನ ಪಾರಂಪರಿಕ ಸೊಗಡಿಗೆ ಧಕ್ಕೆಯಾಗದಂತೆ ಒಂದು ಹೈಟೆಕ್ ‘ಫುಡ್ ಸ್ಟ್ರೀಟ್’ ನಿರ್ಮಾಣವಾದರೆ, ಅದು ಪ್ರವಾಸೋದ್ಯಮಕ್ಕೆ ಹೊಸ ಕಳೆ ತರುವುದರಲ್ಲಿ ಸಂಶಯವಿಲ್ಲ. ಸಂಬಂಧಪಟ್ಟವರು ಈ ನಿಟ್ಟಿನಲ್ಲಿ ಶೀಘ್ರ ಗಮನಹರಿಸಬೇಕಿದೆ.

-ಜಿ.ಎಂ.ತೇಜಸ್, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

19 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

19 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago