ಓದುಗರ ಪತ್ರ
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ ಹೆಸರಿನಲ್ಲಿ ಹೆಸರುವಾಸಿಯಾಗಿದ್ದು, ಸಿಲ್ಕ್ ಸೀರೆ ತಯಾರಿಸಲು ಕಚ್ಚಾ ರೇಷ್ಮೆ ಒದಗಿಸುತ್ತಿರುವ (ತಿ.ನರಸೀಪುರದಲ್ಲಿ ಇರುವ) ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಆತುರಾತುರವಾದ ನಿರ್ಧಾರ ಮಾಡಿ ಬೌಂಡರಿ ಗುರುತಿಸಿ ಸಿಲ್ಕ್ ಫಿಲೇಚರ್ ಮುಚ್ಚಲು ಮುಂದಾಗಿರುವುದು ವಿಪರ್ಯಾಸವೇ ಸರಿ.
ಈ ಸಿಲ್ಕ್ ಫಿಲೇಚರ್ ರೇಷ್ಮೆ ನೂಲಿನ ಎಳೆ(ಕಚ್ಚಾ ರೇಷ್ಮೆ)ಯನ್ನು ತಯಾರಿಸಿ ಮೈಸೂರಿನ ರೇಷ್ಮೆ ಕಾರ್ಖಾನೆಗೆ ಹಾಗೂ ಚನ್ನಪಟ್ಟಣದ ರೇಷ್ಮೆ ಕಾರ್ಖಾನೆಗೆ ಸರಬರಾಜು ಮಾಡಿ ಮೈಸೂರು ಸಿಲ್ಕ್ ಸೀರೆಗಳ ಉತ್ಪಾದನೆಗೆ ನೆರವಾಗುತ್ತಿತ್ತು. ಸರ್ಕಾರ ಕೂಡಲೇ ಕ್ರೀಡಾಂಗಣ ನಿರ್ಮಾಣಕ್ಕೆ ಬೇರೆ ಸ್ಥಳವನ್ನು ಬಳಸಬೇಕು ಹಾಗೂ ಸಿಲ್ಕ್ ಫಿಲೇಚರ್‌ನ್ನು ಯಥಾಸ್ಥಿತಿಯಲ್ಲಿ ಕಾಪಾಡಿಕೊಂಡು ಜಾಗತಿಕ ಮನ್ನಣೆ ಪಡೆದಿರುವ ನಮ್ಮ ಮೈಸೂರು ಸಿಲ್ಕ್ ಸೀರೆ ಉದ್ಯಮದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ವಿರಾಜಪೇಟೆ: ವಿರಾಜಪೇಟೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ…
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…