Andolana originals

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ ಹೆಸರಿನಲ್ಲಿ ಹೆಸರುವಾಸಿಯಾಗಿದ್ದು, ಸಿಲ್ಕ್ ಸೀರೆ ತಯಾರಿಸಲು ಕಚ್ಚಾ ರೇಷ್ಮೆ ಒದಗಿಸುತ್ತಿರುವ (ತಿ.ನರಸೀಪುರದಲ್ಲಿ ಇರುವ) ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಆತುರಾತುರವಾದ ನಿರ್ಧಾರ ಮಾಡಿ ಬೌಂಡರಿ ಗುರುತಿಸಿ ಸಿಲ್ಕ್ ಫಿಲೇಚರ್ ಮುಚ್ಚಲು ಮುಂದಾಗಿರುವುದು ವಿಪರ್ಯಾಸವೇ ಸರಿ.

ಈ ಸಿಲ್ಕ್ ಫಿಲೇಚರ್ ರೇಷ್ಮೆ ನೂಲಿನ ಎಳೆ(ಕಚ್ಚಾ ರೇಷ್ಮೆ)ಯನ್ನು ತಯಾರಿಸಿ ಮೈಸೂರಿನ ರೇಷ್ಮೆ ಕಾರ್ಖಾನೆಗೆ ಹಾಗೂ ಚನ್ನಪಟ್ಟಣದ ರೇಷ್ಮೆ ಕಾರ್ಖಾನೆಗೆ ಸರಬರಾಜು ಮಾಡಿ ಮೈಸೂರು ಸಿಲ್ಕ್ ಸೀರೆಗಳ ಉತ್ಪಾದನೆಗೆ ನೆರವಾಗುತ್ತಿತ್ತು. ಸರ್ಕಾರ ಕೂಡಲೇ ಕ್ರೀಡಾಂಗಣ ನಿರ್ಮಾಣಕ್ಕೆ ಬೇರೆ ಸ್ಥಳವನ್ನು ಬಳಸಬೇಕು ಹಾಗೂ ಸಿಲ್ಕ್ ಫಿಲೇಚರ್‌ನ್ನು ಯಥಾಸ್ಥಿತಿಯಲ್ಲಿ ಕಾಪಾಡಿಕೊಂಡು ಜಾಗತಿಕ ಮನ್ನಣೆ ಪಡೆದಿರುವ ನಮ್ಮ ಮೈಸೂರು ಸಿಲ್ಕ್ ಸೀರೆ ಉದ್ಯಮದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

58 mins ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

2 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

2 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

2 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

3 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

7 hours ago