Andolana originals

ಓದುಗರ ಪತ್ರ: ಮಹನೀಯರ ಜಯಂತಿಗೆ ಜಾತಿ ಚೌಕಟ್ಟು ಸಲ್ಲದು

ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ, ಸಮ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಬುದ್ಧ , ಬಸವಣ್ಣ, ಅಂಬೇಡ್ಕರ್, ಕನಕದಾಸ,
ಮಹರ್ಷಿ ವಾಲ್ಮೀಕಿ ಅವರಂತಹ ಮಹನೀಯರ ಜಯಂತಿ ಕಾರ್ಯಕ್ರಮಗಳು ಇಂದು ಜಾತಿಗಳಿಗೆ ಸೀಮಿತವಾದ ವೇದಿಕೆಗಳಾಗುತ್ತಿವೆ. ಜಾತ್ಯತೀತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಜೀವನವಿಡಿ ಹೋರಾಡಿದ ಇವರು ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಇವರ ಜಯಂತಿಯನ್ನು ಸರ್ವಜನರು ಕೂಡಿ
ಆಚರಿಸಿ ಸಂಭ್ರಮಿಸಬೇಕು. ಆದರೆ ಇಂದು ಜಾತಿ ಬಲದ ಪ್ರದರ್ಶನದ ಸರಕಾಗಿ ಈ ಮಹಾನುಭಾವರ ಜಯಂತಿಗಳು ಬಳಕೆಯಾಗುತ್ತಿರುವುದು ಘೋರ ದುರಂತವೇ ಸರಿ. ‘ಎಲ್ಲಾ ಜನ ಸಮುದಾಯದ ಸೂಚಕವಾಗಿ ವಿಶಾಲ ಅರ್ಥದಲ್ಲಿ ಬಳಕೆಯಾಗಬೇಕಾದ ಸಾಮಾಜಿಕರು ಅಥವಾ ಸಮಾಜದ ಬಂಧುಗಳು ಎಂಬ ವಾಕ್ಯವನ್ನು ಯಾವುದೋ ಒಂದು ಜಾತಿಗೆ ಸೀಮಿತವಾಗಿ ಬಿಂಬಿಸುವ ಪ್ರಯತ್ನಗಳು ಕಾಣುತ್ತಿವೆ. ಆ ಮೂಲಕ ಯಾವುದೇ ತಾರತಮ್ಯವಿರದ ಅವರ ಸರ್ವಶ್ರೇಷ್ಠ ಚಿಂತನೆಗಳಿಗೆ ಮಸಿ ಬಳಿಯುವಂತಾಗುತ್ತಿದೆ. ಮಹನೀಯರ ಜಯಂತ್ಯುತ್ಸವಗಳು ಅವರ ಆಚಾರ – ವಿಚಾರ, ಜೀವನ, ಸಾಧನೆಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಅರ್ಥಪೂರ್ಣ ವೇದಿಕೆಯಾಗಬೇಕೆ ಹೊರತು ಜಾತಿಯನ್ನು ಪೋಷಿಸುವ, ವೈಷಮ್ಯಕ್ಕೆ ಎಡೆಮಾಡಿಕೊಡುವ ಜಾತಿ ಕೇಂದ್ರಿತ
ಕಾರ್ಯಕ್ರಮವಾಗಬಾರದು. ಕಡಿಮೆ ಸಂಖ್ಯೆಯಲ್ಲಿರುವ ತಳ ಸಮುದಾಯದವರ ಆಸೆ, ಆಶೋತ್ತರಗಳನ್ನು, ಅವರ ಆತಂಕ, ತಲ್ಲಣಗಳನ್ನು ಗಮನದಲ್ಲಿರಿಸಿಕೊಂಡು ಜಯಂತಿಯನ್ನು ಆಚರಿಸುವಂತಾದರೆ ಮಹನೀಯರ ಜಯಂತಿ ಕಾರ್ಯಕ್ರಮಗಳು ಸಾರ್ಥಕತೆ ಪಡೆದುಕೊಳ್ಳುತ್ತವೆ. ಈ ಬಗ್ಗೆ ಎಲ್ಲರೂ ಆಲೋಚಿಸಿ ಹೆಜ್ಜೆಯಿಡಬೇಕಿದೆ.

– ಕೊತ್ತಲವಾಡಿ ಶಿವಕುಮಾರ್, ಚಾಮರಾಜನಗರ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

21 mins ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

23 mins ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

25 mins ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

26 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

29 mins ago

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…

33 mins ago