ಓದುಗರ ಪತ್ರ
ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಗರ ಅನಿಸಿಕೊಂಡಿರುವ ಮೈಸೂರಿನಲ್ಲಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ ದೇವಾಲಯಗಳು, ವನ್ಯ ಸಂಪತ್ತು, ಹಲವು ಜಲಾಶಯಗಳು ಮುಕುಟಪ್ರಾಯದಂತಿವೆ. ಇವುಗಳಲ್ಲಿ ಪ್ರಮುಖವಾಗಿ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಆಷಾಢ ವಿಶೇಷ ಪೂಜೆಗಳು ಇನ್ನೇನು ಆರಂಭವಾಗಲಿವೆ. ಇದಕ್ಕಾಗಿ ರಾಜ್ಯ ಸರ್ಕಾರ ಚಾಮುಂಡೇಶ್ವರಿ ದೇವಾಲಯದಲ್ಲಿ ಜೂನ್ ೪,೧೧ ಹಾಗೂ ೧೮ ರಂದು ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಿದೆ. ಜೂನ್ ೧೭ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವ ನಡೆಯಲಿದ್ದು ಶ್ರೀಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ,ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ದೇವರ ದರ್ಶನಕ್ಕೆ ಸರ್ವ ಸಿದ್ಧತೆ ಮಾಡಲಾಗಿದೆ. ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ದೇವಿಯ ನೇರ ದರ್ಶನ ಪಡೆಯಲು ೨,೦೦೦ ರೂ. ವಿಶೇಷ ಪ್ಯಾಕೇಜ್ ನಿಗದಿ ಮಾಡಲಾಗಿದೆ. ಇದು ಸಾಮಾನ್ಯ ಜನರಿಗೆ ಹೊರೆಯಾಗುತ್ತದೆ. ಆದ್ದರಿಂದ ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದವರು ನಿಗದಿಗೊಳಿಸಿರುವ ೨,೦೦೦ ರೂಗಳ ಪ್ಯಾಕೇಜ್ ದರವನ್ನು ಕಡಿಮೆ ಮಾಡಿದರೆ ಸಾಮಾನ್ಯ ವರ್ಗದ ಜನರಿಗೆ ಅನು ಕೂಲವಾಗುತ್ತದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…