Mysore
17
few clouds

Social Media

ಶನಿವಾರ, 24 ಜನವರಿ 2026
Light
Dark

ಓದುಗರ ಪತ್ರ: ಆಸ್ಪತ್ರೆ ಆವರಣದ ಜನೌಷಧಿ ಕೇಂದ್ರಗಳನ್ನು ಮುಚ್ಚುವುದು ಬೇಡ

ಓದುಗರ ಪತ್ರ

ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜನೌಷಧಿ ಕೇಂದ್ರಗಳೂ ಒಂದಾಗಿದ್ದು, ಬಡವರಿಗೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗುತ್ತಿದ್ದು, ಈ ಕೇಂದ್ರಗಳು ಬಡವರಿಗೆ ವರದಾನವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೆಲವು ಔಷಧಿ ಕಂಪೆನಿಗಳ ಒತ್ತಡಕ್ಕೆ ಮಣಿದು ಅವರಿಗೆ ಲಾಭ ಮಾಡಿಕೊಡಲು ಸರ್ಕಾರಿ ಆಸ್ಪತ್ರೆ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲು ಆದೇಶಿಸಿರುವುದು ಖಂಡನೀಯ. ಸರ್ಕಾರಿ ಆಸ್ಪತ್ರೆಗೆ ಬರುವ ಬಹುತೇಕ ರೋಗಿಗಳು ಆರ್ಥಿಕವಾಗಿ ಹಿಂದುಳಿದಿರುತ್ತಾರೆ. ಅವರಿಗಾಗಿಯೇ ತೆರೆದಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವುದು ಸರಿಯಲ್ಲ. ದುಪ್ಪಟ್ಟು ಹಣವನ್ನು ಕೊಟ್ಟು ಔಷಧಿ ಕೊಂಡುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತರು ಹಣವನ್ನು ಕೊಟ್ಟು ಔಷಧಿ ಕೊಂಡುಕೊಳ್ಳುತ್ತಾರೆ. ಆದರೆ ಬಡವರು ಹೆಚ್ಚಿನ ಹಣವನ್ನು ಕೊಟ್ಟು ಖರೀದಿಸಲು ಸಾಧ್ಯವಾಗದೇ ಹೆಣಗಾಡುತ್ತಾರೆ. ಸರ್ಕಾರದ ಯೋಜನೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಷ್ಟೆ . ಆದರೆ ಕೇಂದ್ರ ಸರ್ಕಾರದ ಯೋಜನೆ ಯಾಗಿರುವುದರಿಂದ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಮುಚ್ಚಲು ರಾಜ್ಯ ಸರ್ಕಾರ ಸಂಚುರೂಪಿಸುತ್ತಿದೆ ಎಂದು ಸಾರ್ವಜನಿಕರಲ್ಲಿ ದೊಡ್ಡ ಮಟ್ಟದ ಕೂಗು ಕೇಳಿ ಬರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಈ ಆದೇಶವನ್ನು ಹಿಂಪಡೆದು ಎಂದಿನಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಬೇಕು.

– ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

 

Tags:
error: Content is protected !!