ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ಸಮೀಪ ಇರುವ ಹಯಗ್ರೀವ ಕಾಲೇಜು ಪಕ್ಕ ಮಳೆ ನೀರು ನಿಂತು ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಕಾಲೇಜಿನ ಪಕ್ಕದಲ್ಲಿರುವ ಖಾಲಿ ಜಾಗವನ್ನು ಬೇಸಿಗೆಯಲ್ಲಿ ದನಕರುಗಳನ್ನು ಕಟ್ಟಲು ಬಳಸಲಾಗುತ್ತಿದ್ದು, ಸೆಗಣಿ, ಗಂಜಲದಿಂದಾಗಿ ನೊಣಗಳ ಹಾವಳಿಉಂಟಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಮಳೆಗಾಲದಲ್ಲಿ ಕಾಲೇಜಿನ ಪಕ್ಕ ನೀರು ನಿಲ್ಲುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದೆ. ಮಹಾನಗರಪಾಲಿಕೆಯವರು ನೀರು ನಿಲ್ಲದಂತೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
-ಧ್ಯಾನ್ , ಮೈಸೂರು





