ಓದುಗರ ಪತ್ರ
ಮೈಸೂರು ನಗರದ ೫೦ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ೫ನೇ ಕ್ರಾಸ್, ೧೦ನೇ ಕ್ರಾಸ್, ೮ನೇ ಕ್ರಾಸ್ ಹಾಗೂ ಸಿದ್ದಪ್ಪಾಜಿ ದೇವಾಲಯದ ಬಳಿ ಯುಜಿಡಿ ಮ್ಯಾನ್‌ಹೋಲ್‌ನಿಂದ ಕೊಳಕು ನೀರು ಹೊರ ಬರುತ್ತಿದ್ದು ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ದುರ್ವಾಸನೆ ಯಿಂದ ಮೂಗು ಮುಚ್ಚಿ ಕೊಂಡೇ ಓಡಾಡು ವಂತಾಗಿದೆ. ಸಾರ್ವಜನಿಕರು ಮೈಸೂರು ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಯನ್ನು ತಿಳಿಸುವ ಪ್ರಯತ್ನ ಮಾಡಿದರಾದರೂ ಆಯುಕ್ತರು ಕರೆ ಸ್ವೀಕರಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಚಿತ್ರಗಳನ್ನು ಕಳುಹಿಸಿದರೂ ಕ್ರಮ ವಹಿಸದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಈಗಲಾದರೂ ಸಂಬಂಧ ಪಟ್ಟವರು ಎಚ್ಚೆತ್ತು ಸಮಸ್ಯೆ ನಿವಾರಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
– ಹೇಮಂತ್‌ಕುಮಾರ್, ಸುಣ್ಣದ ಕೇರಿ, ಮೈಸೂರು
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…