ಓದುಗರ ಪತ್ರ
ಮುಂಗಾರು ಮಳೆ ಆರಂಭವಾಗಿದೆ. ಪ್ರವಾಹ ಉಂಟಾಗುವ ಭೀತಿ ಸಹಜವಾಗಿದೆ. ಹಾಗಾಗಿ ನದಿಪಾತ್ರದ ನಿವಾಸಿಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಇದಲ್ಲದೆ, ಮಳೆಯ ಆಗಮನ/ ನಿರ್ಗಮನವನ್ನು ಸುಲಭವಾಗಿ ಅರಿಯುವುದು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಶಾಲೆಗಳಿಗೆ ತೆರಳುವ ಮಕ್ಕಳ ಸುರಕ್ಷತೆ ಬಗೆಗೆ ಹೆತ್ತವರು, ಸಂಬಂಧಪಟ್ಟ ಶಾಲೆಗಳು ಜಾಗ್ರತೆ ವಹಿಸಬೇಕು.
ಅನಾಹುತ ನಡೆದ ಮೇಲೆ ದುಃಖಪಡುವ ಬದಲು ಮೊದಲೇ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಮಳೆ ಆರ್ಭಟಕ್ಕೆ ರಾಜ್ಯಾದ್ಯಂತ ಸಾವು- ನೋವು, ಬೆಳೆ, ಆಸ್ತಿ ನಷ್ಟವಾಗಿವೆ. ಇನ್ನು ಮುಂಗಾರು ಬಿರುಸುಗೊಂಡರೆ ಯಾವ ಪರಿಸ್ಥಿತಿ ಉದ್ಭವಿಸಬಹುದು? ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಮನಗಾಣಬೇಕು. ಅಲ್ಲದೆ, ಮೈಸೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
-ಎಲ್.ಮಹದೇವಯ್ಯ, ರಾಮಕೃಷ್ಣನಗರ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…