ಓದುಗರ ಪತ್ರ
ಮೈಸೂರು ನಗರದ ವಾರ್ಡ್ ನಂ.೫೯ರ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಪಾದಚಾರಿ ಮಾರ್ಗಗಳು ಕಣ್ಮರೆಯಾಗುತ್ತಿದ್ದರೂ ಮೈಸೂರು ನಗರ ಪಾಲಿಕೆಯ ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಾದಚಾರಿ ಮಾರ್ಗಗಳನ್ನು ಮಳಿಗೆ ನಡೆಸುವವರು ಬಳಕೆ ಮಾಡಿಕೊಳ್ಳುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಸಂಜೆಯ ಸಮಯ ಕುವೆಂಪುನಗರದ ಕಾಂಪ್ಲೆಕ್ಸ್‌ನಿಂದ ವಿವೇಕಾನಂದ ವೃತ್ತವೂ ಸೇರಿದಂತೆ
ಶ್ರೀರಾಂಪುರದ ಭ್ರಮರಾಂಬ ಕಲ್ಯಾಣ ಮಂಟಪದ ಬಸ್ ನಿಲ್ದಾಣದವರೆಗೆ ರಸ್ತೆಯಲ್ಲಿ ಸರಿಯಾಗಿ ವಾಹನ ನಿಲುಗಡೆ ಮಾಡದೆ ಇರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಈ ಅಪಘಾತಗಳನ್ನು ತಡೆಯಲು ಕ್ರಮವಹಿಸಬೇಕು. ನಗರದ ದೇವರಾಜ ಅರಸು ರಸ್ತೆಯ ಒಂದು ಬದಿಯಲ್ಲಿ ಕಾರು ನಿಲುಗಡೆ, ಮತ್ತೊಂದು ಬದಿಯಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಅನುಕೂಲವಾಗುವಂತೆ ರಸ್ತೆಗೆ ಬಿಳಿ ಬಣ್ಣದ ಗೆರೆಗಳನ್ನು ಹಾಕಿಸಲು ಸಂಚಾರ ಪೊಲೀಸರು ಕ್ರಮಕೈಗೊಳ್ಳಬೇಕು. ಸಂಜೆ ೫ ಗಂಟೆಯಿಂದ ರಾತ್ರಿ ೧೧ರವರೆಗೆ ಈ ರಸ್ತೆಯಲ್ಲಿ ಜಾಹೀರಾತು ಫಲಕಗಳೇ ತುಂಬಿರುತ್ತವೆ. ಅಂಗಡಿಗಳವರು ತಮ್ಮ ತಮ್ಮ ಮಳಿಗೆಗಳ ಜಾಹೀರಾತು -ಲಕಗಳನ್ನು ರಸ್ತೆಯಲ್ಲಿ ಇಟ್ಟುಕೊಳ್ಳುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ಮಹಾನಗರ ಪಾಲಿಕೆ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ್ದ -ಟ್ ಪಾತ್‌ಗಳು ಇಂದು ಅನುಕೂಲಕ್ಕೆ ಬಾರದೆ ವ್ಯರ್ಥವಾಗುತ್ತಿವೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೇ ಕಾರಣರಾಗಿದ್ದು, ಇನ್ನು ಮುಂದಾದರೂ ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…