ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರಾತ್ರಿ ವೇಳೆ ವಿದ್ಯುತ್ ದೀಪ ಇಲ್ಲದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯರಸ್ತೆಯಿಂದ ಸ್ನಾತಕೋತ್ತರ ಪುರುಷರ ವಿದ್ಯಾರ್ಥಿನಿಲಯಗಳ ರಸ್ತೆ, ಗೌತಮಬುದ್ಧ ಸ್ಮಾರಕ ಹಾಗೂ ಇನ್ನಿತರ ಅಧ್ಯಯನ ವಿಭಾಗಗಳ ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ರಾತ್ರಿ ವೇಳೆ ರಸ್ತೆಗಳಲ್ಲಿ ಕ್ರಿಮಿಕೀಟಗಳು, ಹಾವುಗಳು ಓಡಾಡುವುದು ಕಂಡುಬಂದಿದೆ. ಸಂಬಂಧಪಟ್ಟವರು ಕೂಡಲೇ ಮಾನಸಗಂಗೋತ್ರಿ ಆವರಣದಲ್ಲಿ ವಿದ್ಯುತ್ ದೀಪ ಅಳವಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು