Mysore
16
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಓದುಗರ ಪತ್ರ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಕ್ರಮ ಅಗತ್ಯ

ಓದುಗರ ಪತ್ರ

ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ ಸಭೆ ಅಧಿವೇಶನದಲ್ಲಿ ಚರ್ಚೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯಸರ್ಕಾರ ಮಕ್ಕಳಿಗೆ ಉಚಿತವಾಗಿ ನೀಡುತ್ತಿರುವ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ ಹೀಗೆ ಹತ್ತು ಹಲವಾರು ಸೌಲಭ್ಯಗಳ ಜೊತೆಗೆ ಪ್ರತಿ ೩ ತಿಂಗಳಿಗೊಮ್ಮೆ ಪೋಷಕರ ಸಭೆ ನಡೆಸಿ ಮಕ್ಕಳ ಕಲಿಕಾ ಪ್ರಗತಿ ಕುರಿತು ಚರ್ಚಿಸುವುದು ಹಾಗೂ ಸಾರ್ವಜನಿಕರಲ್ಲಿ ಅರಿವನ್ನು ನಿರಂತರವಾಗಿ ಮೂಡಿಸುವುದು ಅಗತ್ಯವಾಗಿದೆ.

ಇಷ್ಟೆಲ್ಲಾ ಸರ್ಕಾರದ ಫಲಪ್ರದ ಯೋಜನೆಗಳ ಹೊರತಾಗಿಯೂ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿತಕ್ಕೆ ಇರುವ ಕಾರಣಗಳಾದರೂ ಏನು ಎಂಬುದರ ಬಗ್ಗೆ ಸರ್ಕಾರ ಹಾಗೂ ಮಕ್ಕಳ ಪೋಷಕರು ಗಂಭೀರ ಚಿಂತನೆಗಳನ್ನು ನಡೆಸಿ ಪರಾಮರ್ಶೆ ಮಾಡುವುದು ಅವಶ್ಯ ವಾಗಿದೆ.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

Tags:
error: Content is protected !!