ಓದುಗರ ಪತ್ರ
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು ಕನಿಷ್ಠ ಶೇ.೧೦ರಷ್ಟು ಹೆಚ್ಚಳ ಮಾಡಲು ಮುಂದಾಗಿರುವುದು ಪೋಷಕರಿಗೆ ಮತ್ತೊಂದು ದೊಡ್ಡ ಹೊರೆಯಾಗಿದೆ.
ಈಗಾಗಲೇ ಶೈಕ್ಷಣಿಕ ಶುಲ್ಕ, ಪುಸ್ತಕ ಹಾಗೂ ಸಮವಸ್ತ್ರಗಳ ವೆಚ್ಚದಿಂದ ಕಂಗಾಲಾಗಿರುವ ಪೋಷಕರಿಗೆ ಈ ದರ ಏರಿಕೆ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಸುಮಾರು ೨೦ ಸಾವಿರಕ್ಕೂ ಹೆಚ್ಚು ಶಾಲಾ ವಾಹನಗಳು ಮಕ್ಕಳ ಸೇವೆಯಲ್ಲಿದ್ದು, ಇಂಧನ ದರ ಏರಿಕೆಯಿಂದಾಗಿ ಇವುಗಳ ನಿರ್ವಹಣೆ ಕಷ್ಟಕರವಾಗಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಶಾಲಾ ವಾಹನಗಳಿಗೆ ತ್ರೆ ಮಾಸಿಕ ರಸ್ತೆ ತೆರಿಗೆ ಮತ್ತು ಟೋಲ್ ಶುಲ್ಕದಲ್ಲಿ ವಿಶೇಷ ವಿನಾಯಿತಿ ನೀಡಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ ಬಸ್ ಹಾಗೂ ವ್ಯಾನ್‌ಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ಒದಗಿಸಬೇಕು. ಖಾಸಗಿ ಸಾರಿಗೆ ಕ್ಷೇತ್ರವು ನಷ್ಟಕ್ಕೆ ಸಿಲುಕದಂತೆ ಸರ್ಕಾರವು ನಿಯಮಿತವಾಗಿ ಆರ್ಥಿಕ ಅನುದಾನ ಅಥವಾ ಪ್ಯಾಕೇಜ್ ಘೋಷಿಸಬೇಕು.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…