ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ ಆಡಳಿತಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಅವರು ವಾರದೊಳಗೆ ಇ-ಖಾತಾ, ತಿಂಗಳೊಳಗೆ ಸಿ ಆರ್ ನೀಡಬೇಕು, ಒಂದು ವೇಳೆ ನೀಡದಿದ್ದರೆ ತಮ್ಮನ್ನಾಗಲಿ ಅಥವಾ ಪಾಲಿಕೆ ಆಯುಕ್ತೆ ಎಂ. ಕೆ.ಸವಿತಾ ಅವರನ್ನಾಗಲಿ ಭೇಟಿ ಮಾಡಿ ದೂರು ನೀಡಬಹುದು ಎಂದು ಸಲಹೆ ನೀಡಿರುವುದು ಶ್ಲಾಘನೀಯ.
ಇದೇ ಸಂದರ್ಭದಲ್ಲಿ ಮೈಸೂರಿನ ಯರಗನಹಳ್ಳಿಯ ಶಿಕ್ಷಕರ ಬಡಾವಣೆಯ ಸಿ. ಚಾಮೇಗೌಡ ಎಂಬವರು, ಕಳೆದ ಒಂದು ವರ್ಷದಿಂದ ಇ-ಖಾತಾ ನೀಡದೆ ಅಧಿಕಾರಿಗಳು ಅಲೆದಾಡಿಸುತ್ತಿದ್ದಾರೆ ಎಂದು ದೂರು ನೀಡಿದ ನಂತರ, ಸ್ಥಳದ ಸಂಬಂಧಿಸಿದ ಅಧಿಕಾರಿಯನ್ನು ಕರೆಸಿದ ನಿತೀಶ್ ಪಾಟೀಲ್ ಅವರು ಇ-ಖಾತಾ ನೀಡುವಂತೆ ಸೂಚನೆ ನೀಡಿದ ಒಂದು ಗಂಟೆಯೊಳಗೆ ಸಿ.ಚಾಮೇಗೌಡರ ಕೈಸೇರಿದ್ದು ಖುಷಿ ವಿಷಯವಾದರೂ ಒಂದು ವರ್ಷದಿಂದ ಅಲೆದಾಡಿಸಿದ ಅಧಿಕಾರಿಗಳ ಜವಾಬ್ದಾರಿ ಏನು ಎಂಬುದು ಯಕ್ಷಪ್ರಶ್ನೆಯಾಗಿದೆ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…
ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…
ಕಾಂಗೀರ ಬೋಪಣ್ಣ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಆತಂಕ ವಿರಾಜಪೇಟೆ: ತಾಲ್ಲೂಕಿನಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಭತ್ತದ ಬೆಳೆಗೆ…