ಓದುಗರ ಪತ್ರ
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ ನಿರ್ಧಾರ ರಾಜದ್ಯಂತ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಸರ್ಕಾರ ಒತ್ತಾಯಕ್ಕೆ ಮಣಿದು, ಈ ಹಿಂದೆ ತಾನು ಮಾಡಿದ ನಿರ್ಣಯದಂತೆ ಒಂದು ವರ್ಷ ಇದ್ದ ವಯೋಮಿತಿಯನ್ನು ಆರು ವರ್ಷದಿಂದ ಅರವತ್ತು ದಿನಗಳು, ಅಂದರೆ ಈ ಹಿಂದಿನಂತೆಯೇ ೫ ವರ್ಷ ಮತ್ತು ಹತ್ತು ತಿಂಗಳಿಗೆ ಶೈಕ್ಷಣಿಕ ವರ್ಷ ೨೦೨೬-೨೭ರಿಂದಲೇ ಅನ್ವಯವಾಗುವಂತೆ ಸಡಿಲಿಸಿರುವ ನಡೆ ಸ್ವಾಗತಾರ್ಹ. ಸಾಮಾನ್ಯವಾಗಿ ಪೋಷಕರು ಎಲ್‌ಕೆಜಿಗೆ ಸೇರಿಸುವಾಗಲೇ ವಯೋಮಿತಿ ಬಗ್ಗೆ ತಲೆಕಡಿಸಿಕೊಳ್ಳದೇ ನಂತರ ಒಂದನೇ ತರಗತಿಗೆ ಬಂದಾಗ ಪರಿತಪಿಸುವಂತಾಗುತ್ತಿದ್ದು, ಈ ನಿಟ್ಟಿನಲ್ಲಿಯೂ ಸರ್ಕಾರ ಒಂದು ತಿದ್ದುಪಡಿ ಕಾಯಿದೆಯ ಮೂಲಕ ಎಲ್‌ಕೆಜಿ ಪ್ರವೇ ಶಾತಿಗೆ ಮೂರು ವರ್ಷ ಹತ್ತು ತಿಂಗಳೆಂದು ಪರಿಗಣಿಸುವಂತೆ ಮಾಡುತ್ತಿರುವುದಾಗಿ ಶಿಕ್ಷಣ ಸಚಿವರು ಹೇಳಿzರೆ. ಈ ನಿರ್ಧಾರ ಉತ್ತಮವಾದುದು. ಇದರಿಂದಾಗಿ ಎಲ್‌ಕೆಜಿಗೆ ಸೇರಿಸುವಾಗಲೇ ಪೋಷಕರು ಸೂಕ್ತ ನಿರ್ಧಾರ ಕೈಗೊಂಡು ಮುಂದೆ ಮುಜುಗರಕ್ಕೀಡಾಗುವ ಪರಿಸ್ಥಿತಿ ತಪ್ಪಿಸಬಹುದಾಗಿದೆ.
– ವಿಜಯ್ ಹೆಮ್ಮಿಗೆ, ಮೈಸೂರು
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…