Andolana originals

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ ತಂದು ಪ್ರಾಥಮಿಕ ಹಂತದಿಂದಲೇ ಎಐ ಸಾಕ್ಷರತೆಯನ್ನು ಕಡ್ಡಾಯಗೊಳಿಸಬೇಕು. ಇದು ಭವಿಷ್ಯದ ಪೀಳಿಗೆಯನ್ನು ಬಳಕೆದಾರರನ್ನಾಗಿ ಮಾಡುವುದು ಮಾತ್ರವಲ್ಲದೆ, ಸೃಷ್ಟಿ ಕರ್ತರನ್ನಾಗಿಯೂ ರೂಪಿಸುತ್ತದೆ.

ಎರಡ ನೆಯದಾಗಿ, ಉದ್ಯೋಗ ನಷ್ಟದ ಭೀತಿಯನ್ನು ಹೋಗಲಾಡಿ ಸಲು ದೊಡ್ಡಮಟ್ಟದ ರೀ-ಸ್ಕಿಲ್ಲಿಂಗ್ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ಸಾಂಪ್ರದಾಯಿಕ ಕಾರ್ಮಿಕರು ಹೊಸ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಲು ಸಾಧ್ಯವಾಗುತ್ತದೆ. ಮೂರನೆಯದಾಗಿ ಡೇಟಾ ಸುರಕ್ಷತೆ ಮತ್ತು ನೈತಿಕ ಬಳಕೆಗೆ ಸಂಬಂಧಿಸಿದಂತೆ ಬಲಿಷ್ಠ ಕಾನೂನು ಚೌಕಟ್ಟನ್ನು ರೂಪಿಸುವುದು ಅತ್ಯಗತ್ಯ. ಕರ್ನಾಟಕದಂತಹ ರಾಜ್ಯಗಳು ಕನ್ನಡದಂತಹ ಸ್ಥಳೀಯ ಭಾಷೆಗಳಲ್ಲಿ ಎಐ ಮಾದರಿಗಳನ್ನು ಅಭಿವೃದ್ಧಿಪಡಿಸಲು ಸ್ಟಾರ್ಟ್ ಅಪ್‌ಗಳಿಗೆ ವಿಶೇಷ ಅನುದಾನ ನೀಡಬೇಕು. ಸರ್ಕಾರಿ ಸೇವೆಗಳಲ್ಲಿ ಎಐ ಅಳವಡಿಸಿಕೊಳ್ಳುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ತರಬೇಕು ಮತ್ತು ಸಾರ್ವಜನಿಕರಿಗೆ ಶೀಘ್ರ ಸೇವೆ ಸಿಗುವಂತೆ ಮಾಡಬೇಕು. ತಂತ್ರಜ್ಞಾನವನ್ನು ಮಾನವೀಯ ಮೌಲ್ಯಗಳೊಂದಿಗೆ ಬೆರೆಸುವಲ್ಲಿ ಸರ್ಕಾರದ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ.

-ಡಾ.ಎಚ್.ಕೆ.ವಿಜಯಕುಮಾರ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

3 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

4 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

4 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

4 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

4 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

9 hours ago