Andolana originals

ಓದುಗರ ಪತ್ರ: ಸರ್ವ ಪಕ್ಷಗಳ ವಿಶ್ವಾಸ ಅಗತ್ಯ

ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಕಾಂಗ್ರೆಸ್ ಸೇರಿದಂತೆ ಕೆಲ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಲೋಕಸಭೆಗೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಭಾರತಕ್ಕೆ ಹೊಸತೇನಲ್ಲ.

ಸ್ವತಂತ್ರ ಭಾರತದ ಮೊದಲ ಎರಡು ಸಾರ್ವತ್ರಿಕ ಚುನಾವಣೆಗಳ ಜತೆಯಲ್ಲಿಯೇ ವಿವಿಧ ರಾಜ್ಯಗಳ ವಿಧಾನಸಭೆಗಳಿಗೂ ಚುನಾವಣೆಗಳು ನಡೆದಿದ್ದವು. ಏಕ ಕಾಲದಲ್ಲಿ ಚುನಾವಣೆಗಳನ್ನು ನಡೆಸುವುದರಿಂದ ದೇಶಕ್ಕೆ ಆರ್ಥಿಕ ಹೊರೆಯು ತಪ್ಪುವುದರ ಜತೆಗೆ ವಿವಿಧ ರಾಜಕೀಯ ಪಕ್ಷಗಳ ಪ್ರಚಾರದ ಖರ್ಚನ್ನೂ ಕಡಿಮೆಗೊಳಿಸಬಹುದು. ಇದನ್ನು ಜಾರಿಗೆ ತರಲು ಸಾಂವಿಧಾನಿಕ ಬದಲಾವಣೆಗಳು ಆಗಬೇಕು. ಜಾರಿ ಮಾಡುವ ಮುನ್ನ ಚುನಾವಣಾ ಚಕ್ರಗಳನ್ನು ಮರುಹೊಂದಾಣಿಕೆ ಜತೆಗೆ ಕಾನೂನುಬದ್ಧವಾಗಿ ಸಮರ್ಥನೀಯ ಚೌಕಟ್ಟನ್ನು ಕಟ್ಟುವುದು ಅವಶ್ಯ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ಕಾರದ ಎಲ್ಲ ನಿರ್ಣಯಗಳಿಗೂ ಪರ-ವಿರುದ್ಧದ ಚರ್ಚೆ ಉದ್ಭವಿಸುವುದು ಸಹಜ. ಒಂದು ದೇಶ ಒಂದು ಚುನಾವಣೆ ಜಾರಿಯಾದರೆ ಅದರಿಂದ ಪ್ರಾದೇಶಿಕ ಪಕ್ಷಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಬಹುದು. ಆದ್ದರಿಂದ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದು ಅವರ ವಿಶ್ವಾಸವನ್ನೂ ಪಡೆದು ಈ ಯೋಜನೆಯನ್ನು ಸರ್ವಾನುಮತದಿಂದ ಅನುಷ್ಠಾನಕ್ಕೆ ತರುವುದು ಸೂಕ್ತ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

andolana

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

12 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

13 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

13 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

13 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

13 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

13 hours ago