ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಾದ ಕೆ.ಎಸ್. ಬಸವಂತಪ್ಪ ಅವರು ಇತ್ತೀಚೆಗೆ ರಾಜ್ಯ ಸರ್ಕಾರ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಕನಿಷ್ಠ ಮೂರರಿಂದ ಐದು ಲಕ್ಷ ರೂ. ಲಂಚ ಪಡೆಯುತ್ತಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಹೇಳಿದ್ದಾರೆ. ಇದೇ ಮಾತನ್ನು, ವಿರೋಧ ಪಕ್ಷದವರು ಹೇಳಿದ್ದರೆ ಸರ್ಕಾರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಹೊರಟಿರುವುದನ್ನು ಸಹಿಸದೇ ವಿರೋಧ ಪಕ್ಷದವರು ಮಾತನಾಡುತ್ತಿದ್ದಾರೆ ಎಂದು ಆಡಳಿತ ಪಕ್ಷದವರು ಆಪಾದಿಸುತ್ತಿದ್ದರು.
ಇತ್ತೀಚೆಗೆ ರಾಜ್ಯ ಸರ್ಕಾರದ ವಿರುದ್ಧ ಅನೇಕ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾದ ಬಸವರಾಜ ರಾಯರಡ್ಡಿ ಅವರು ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ನಂ.೧ ಎಂದು ಆಪಾದಿಸಿದ್ದರು. ರಾಜ್ಯ ಗುತ್ತಿಗೆದಾರರ ಸಂಘವು, ನಮ್ಮ ಬಾಕಿ ಬಿಲ್ ಪಾವತಿಸಲು ಕೆಲವು ಸಚಿವರ ಆಪ್ತರು ಶೇ. ೬೦ ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು ಆಪಾದಿಸಿದ್ದರು. ಸರ್ಕಾರದ ವಿರುದ್ಧ ಗಂಭೀರ ಆರೋಪ ಕೇಳಿ ಬರುತ್ತಿದ್ದರೂ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಯೇ ಇಲ್ಲ
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…